ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಭರಮಸಾಗರ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಹಾಗೂ ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ (29 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕಿ) ಒಟ್ಟು 257 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://karnemakaone.kar.nic.in/abcd/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಸದರಿ ನೇಮಕಾತಿಯ ವಿವರ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ಆಗಸ್ಟ್ 13, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 05, 2025
ಖಾಲಿ ಇರುವ ಹುದ್ದೆಗಳ ವಿವರ:
✓ ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 7 ಅಂಗನವಾಡಿ ಕಾರ್ಯಕರ್ತೆ, 23 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 30 ಹುದ್ದೆಗಳು ಖಾಲಿ ಇದೆ.
✓ ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 2 ಅಂಗನವಾಡಿ ಕಾರ್ಯಕರ್ತೆ, 9 ಅಂಗನವಾಡಿ ಸಹಾಯಕಿ ಸೇರಿ ಒಟ್ಟು11 ಹುದ್ದೆಗಳು ಖಾಲಿ ಇದೆ.
✓ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 2 ಅಂಗನವಾಡಿ ಕಾರ್ಯಕರ್ತೆ, 24 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 26 ಹುದ್ದೆಗಳು ಖಾಲಿ ಇದೆ.
✓ ಹಿರಿಯೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 2 ಅಂಗನವಾಡಿ ಕಾರ್ಯಕರ್ತೆ, 53 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 55 ಹುದ್ದೆಗಳು ಖಾಲಿ ಇದೆ.
✓ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 4 ಅಂಗನವಾಡಿ ಕಾರ್ಯಕರ್ತೆ, 45 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 49 ಹುದ್ದೆಗಳು ಖಾಲಿ ಇದೆ.
✓ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 11 ಅಂಗನವಾಡಿ ಕಾರ್ಯಕರ್ತೆ, 53 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 64 ಹುದ್ದೆಗಳು ಖಾಲಿ ಇದೆ.
✓ ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ – 1 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 22 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ:
ನೇಮಕಾತಿ ಪ್ರಕಟಣೆಯ ಪ್ರಕಾರ;
• ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ – ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿ.ಯು.ಸಿ(12th) ತೇರ್ಗಡೆ ಹೊಂದಿರಬೇಕು.
• ಅಂಗನವಾಡಿ ಸಹಾಯಕಿ ಹುದ್ದೆಗೆ – ಎಸ್.ಎಸ್.ಎಲ್.ಸಿ(10th) ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 19 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಅರ್ಜಿ ಶುಲ್ಕ
ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for Chitradurga Anganwadi Recruitment 2025
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ https://karnemakaone.kar.nic.in/abcd/ಗೆ ಭೇಟಿ ನೀಡಿ.
ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನೀವು ಅರ್ಜಿ ಸಲ್ಲಿಸುತ್ತಿರುವ ಜಿಲ್ಲೆಯ ಹೆಸರು ಹಾಗೂ ಯೋಜನೆಯನ್ನು ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ.
ನಂತರ ನಿಮ್ಮ ಭಾವಚಿತ್ರ ಸಹಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಮುದ್ರಿಸಿ.