Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
PUC ಮತ್ತು SSLC ಪಾಸ್ ಮಾಡಿರುವ ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆಸಕ್ತ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಆಗಸ್ಟ್ 30, 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.
Shortview of Chitradurga Anganwadi Notification 2024
Organization Name – Women & Child Development (WCD)