ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ(ಬಿಲ್ ಕಲೆಕ್ಟರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಮೈಲನಹಳ್ಳಿ, ಹಿರೇಹಳ್ಳಿ, ಸಿರಿಗೆರೆ, ಸಾಣಿಕರೆ, ತಂಗಡ, ಆರ್.ನುಲೇನೂರು, ದೊಡ್ಡೇರಿ, ಜಾಜೂರು ಹಾಗೂ ಗನ್ನಾಯನಕನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಚಿತ್ರದುರ್ಗ ಜಿಲ್ಲೆಯ ಅಧಿಕೃತ ಜಾಲತಾಣ https://chitradurga.nic.in/ ಕ್ಕೆ ಭೇಟಿ ನೀಡಿ, ಫೆಬ್ರವರಿ 8ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಆರಿಸಿಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು ಹಾಗೂ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ತರಬೇತಿ ಕೋರ್ಸ್ ಪೂರ್ಣಗೊಳಿಸಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
ವಯೋಮಿತಿ:
08-02-2026 ರಂತೆ;
• ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷಗಳು • 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ – 38 ವರ್ಷಗಳು • ಪ.ಜಾತಿ, ಪ.ಪಂ ಹಾಗೂ ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ – 40 ವರ್ಷಗಳು
ಆಯ್ಕೆ ವಿಧಾನ:
ಅಭ್ಯರ್ಥಿಯು ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಹಾಗೂ ರೋಸ್ಟರ್, ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸಂಬಳ:
ಗ್ರಾಮ ಪಂಚಾಯತಿ ಕರವಸೂಲಿಗಾರ ಹುದ್ದೆಗಳಿಗೆ ಮಾಹೆಯಾನ ಕನಿಷ್ಠ ವೇತನದ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು (VDA) ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಮೇಲಿನ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಅಧಿಕೃತ ಜಾಲತಾಣ https://chitradurga.nic.in/ ಕ್ಕೆ ಭೇಟಿ ನೀಡಿ.
• ನಂತರ ಇತ್ತೀಚಿನ ಸುದ್ದಿ ವಿಭಾಗದಲ್ಲಿ ನೀಡಲಾಗಿರುವ “ಚಿತ್ರದುರ್ಗದ ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರ (ಬಿಲ್ ಕಲೆಕ್ಟರ್) ಹುದ್ದೆಗೆ ಅರ್ಜಿ. New” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಸಹಿ ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.