ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ನಲ್ಲಿ ನಾನಾ ಪ್ಯಾರಾ ಮೆಡಿಕಲ್ ಸಿಬ್ಬಂದಿ(ಅಸಿಸ್ಟಂಟ್ ಸಬ್-ಇನ್ಸ್ಪೆಕ್ಟರ್)ನೇಮಕಾತಿಗಾಗಿ ಕಿರು ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಕೆಯು ಜೂ.08ರಿಂದ ಆರಂಭವಾಗಲಿದೆ.
18-ಎಎಸ್ಐ ಫಾರ್ಮಸಿಸ್ಟ್, 01-ಎಎಸ್ಐ ಎಕ್ಸರೇ ಟೆಕ್ನಿಷಿಯನ್ ಮತ್ತು 05-ಎಎಸ್ಐ ಲ್ಯಾಬ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 24 ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ಭರ್ತಿ ನಡೆಯಲಿದೆ. ಸಂಬಂಧಿತ ಆಯಾ ವಿಷಯಗಳಲ್ಲಿ ಡಿಪ್ಲೊಮಾ/ಪದವಿ ಹೊಂದಿರಬೇಕು. ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಿಐಎಸ್ಎಫ್ನ ಅಧಿಕೃತ ವೆಬ್ಸೈಟ್ https://cisf.gov.in/ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಜುಲೈ 07ರವರೆಗೆ ಕಾಲಾವಕಾಶವಿದೆ.
✓ ಎಎಸ್ಐಫಾರ್ಮಸಿಸ್ಟ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ಫಾರ್ಮಸಿಯಲ್ಲಿ ಡಿಪ್ಲೊಮಾ/ಪದವಿ ಪೂರ್ಣಗೊಳಿಸಿರಬೇಕು. ಮತ್ತು ಫಾರ್ಮಸಿಸ್ಟ್ ಕಾಯ್ದೆಯಡಿಯಲ್ಲಿ ಫಾರ್ಮಸಿಸ್ಟ್ ಆಗಿ ನೋಂದಾಯಿಸಿಕೊಂಡಿರಬೇಕು.
✓ ಎಎಸ್ಐಎಕ್ಸರೇ ಟೆಕ್ನಿಷಿಯನ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ರೇಡಿಯಾಗ್ರಫಿಯಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
✓ ಎಎಸ್ಐಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಕೇಂದ್ರ ಸರ್ಕಾರದ ಇಲಾಖಾ ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 45 ವರ್ಷಗಳು.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದೈಹಿಕ ಗುಣಮಟ್ಟ ಪರೀಕ್ಷೆ(ಪಿಎಸ್ಟಿ)
ದಾಖಲಾತಿ ಪರಿಶೀಲನೆ
ಮೂಲ ವೃತ್ತಿಪರ ಸಾಮರ್ಥ್ಯ ಪರೀಕ್ಷೆ(ಬಿವಿಎಟಿ)
ವೈದ್ಯಕೀಯ ಪರೀಕ್ಷೆ
ಸಂಬಳ:
ಪ್ರತಿ ತಿಂಗಳು ₹29,200-92,300ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಓಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹100 ಪ.ಜಾತಿ, ಪ.ಪಂಗಡ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• CISF ನ ಅಧಿಕೃತ ವೆಬ್ಸೈಟ್ https://cisfrectt.cisf.gov.in/index.phpಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ
• ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ.