ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾಗಿರುವ ಕೋಲ್ ಇಂಡಿಯಾ ಲಿಮಿಟೆಡ್ ತನ್ನ ವಿವಿಧ ಅಂಗಸಂಸ್ಥೆಗಳು/ಕಚೇರಿಗಳಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಡಿ.26 ರಿಂದ ಪ್ರಾರಂಭವಾಗಲಿದೆ.
ಒಟ್ಟು 125 ಸಿಎ/ಸಿಎಂಎ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2026
ವಲಯವಾರು ಖಾಲಿ ಇರುವ ತರಬೇತುದಾರ ಹುದ್ದೆಗಳ ವಿವರ:
ಕೋಲ್ ಇಂಡಿಯಾ ಲಿಮಿಟೆಡ್. – 07 ಹುದ್ದೆಗಳು ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್. – 12 ಹುದ್ದೆಗಳು ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ – 15 ಹುದ್ದೆಗಳು ಸಿ.ಎಮ್.ಪಿ.ಡಿ.ಐ.ಎಲ್ – 07 ಹುದ್ದೆಗಳು ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ – 12 ಹುದ್ದೆಗಳು ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್. – 20 ಹುದ್ದೆಗಳು ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ – 20 ಹುದ್ದೆಗಳು ಸೌತ್ ಈಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ – 20 ಹುದ್ದೆಗಳು ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ – 12 ಹುದ್ದೆಗಳು
ಒಟ್ಟು – 125 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ (CA) ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ವೆಚ್ಚ ಮತ್ತು ನಿರ್ವಹಣಾ ಲೆಕ್ಕಪತ್ರಗಾರ (CMA) ಮಧ್ಯಂತರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
✓ ಸಾಮಾನ್ಯ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು ✓ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 31 ವರ್ಷಗಳು ✓ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 33 ವರ್ಷಗಳು ✓ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸನಮಿತಿ – 10-15 ವರ್ಷಗಳು
ಆಯ್ಕೆ ವಿಧಾನ:
ಅಭ್ಯರ್ಥಿಗಳು CA/CMA ಮಧ್ಯಂತರ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 22,000ರೂ. ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/ ಕ್ಕೆ ಭೇಟಿ ನೀಡಿ.
• ನಂತರ “ತ್ವರಿತ ಲಿಂಕ್” ವಿಭಾಗದ ಕೆಳಗೆ ನೀಡಲಾಗಿರುವ “ಕೈಗಾರಿಕಾ ತರಬೇತಿ (CA/CMA) 2025 ರ ನೇಮಕಾತಿ ಅರ್ಜಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.̳