ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ(MT) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Published on:

ಕೋಲ್ ಇಂಡಿಯಾ ಲಿಮಿಟೆಡ್(ಸಿಐಎಲ್‌)ನಲ್ಲಿ 660 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಿವಿಲ್, ಎಲೆಕ್ಟ್ರಿಕಲ್, ಮೆಕಾನಿಕಲ್, ಸಿಸ್ಟಮ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪದವೀಧರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜೂ.11ರವರಿಗೆ ಅವಕಾಶವಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/career-cil/jobs-coal-india/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ- ಮೇ 12, 2026
  • ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಜೂನ್ 11, 2026

ಖಾಲಿ ಇರುವ ಹುದ್ದೆಗಳ ವಿವರ:

ಸಿವಿಲ್ 178 ಹುದ್ದೆಗಳು
ಎಲೆಕ್ಟ್ರಿಕಲ್ 221 ಹುದ್ದೆಗಳು
ಮೆಕಾನಿಕಲ್ 145 ಹುದ್ದೆಗಳು
ಸಿಸ್ಟಮ್ 43 ಹುದ್ದೆಗಳು
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ 38 ಹುದ್ದೆಗಳು
ಭೂವಿಜ್ಞಾನ 15 ಹುದ್ದೆಗಳು
ಇಂಡಸ್ಟ್ರಿಯಲ್ ಎಂಜಿನಿಯರಿಂಗ್ 11 ಹುದ್ದೆಗಳು
ರಾಜ್ ಭಾಷಾ 05 ಹುದ್ದೆಗಳು
ಕಂಪನಿ ಸೆಕ್ರೆಟರಿ 04 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಶಿಸ್ತುಗಳಿಗೆ ಅನುಗುಣವಾಗಿ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್, ಬಿ.ಎಸ್ಸಿ, ಎಂ.ಎಸ್ಸಿ/ಎಂ.ಟೆಕ್, ಎಂಎ ಮತ್ತು ಕಂಪನಿ ಸೆಕ್ರೆಟರಿ ಹುದ್ದೆಗಳಿಗೆ ಪದವಿಯೊಂದಿಗೆ ಕಂಪನಿ ಕಾರ್ಯದರ್ಶಿ ಅರ್ಹತೆಯನ್ನು ಪಡೆದಿರಬೇಕು ಮತ್ತು ಐಸಿಎಸ್‌ಐನ ಅಸೋಸಿಯೇಟ್/ಫೆಲೋ ಸದಸ್ಯತ್ವವನ್ನು ಹೊಂದಿರಬೇಕು.

ವಯೋಮಿತಿ:

30-04-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ:

• ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ)
• ದಾಖಲೆಗಳ ಪರಿಶೀಲನೆ(ಡಿವಿ)
• ಆರಂಭಿಕ ವೈದ್ಯಕೀಯ ಪರೀಕ್ಷೆ(ಐಎಂಇ)

ಸಂಬಳ:

ಪ್ರತಿ ತಿಂಗಳು ₹60,000 – ₹1,80,000ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹1180
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಕೋಲ್ ಇಂಡಿಯಾ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳ ಉದ್ಯೋಗಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/career-cil/jobs-coal-india/ಕ್ಕೆ ಭೇಟಿ ನೀಡಿ.

• ನಂತರ ಮೇ 12ರಂದು ಸಕ್ರಿಯವಾಗುವ”ನಿರ್ವಹಣಾ ತರಬೇತುದಾರರ ನೇಮಕಾತಿಜಾಹೀರಾತು ಸಂಖ್ಯೆ: 03/2026″ ಅರ್ಜಿ ನಮೂನೆಯನ್ನು ಆಯ್ಕೆ ಮಾಡಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form Link(ಮೇ 12ರಿಂದ)Apply
Official Websitewww.coalindia.in
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment