CCMB ಕೇಂದ್ರದಲ್ಲಿ ತಂತ್ರಜ್ಞರ ನೇಮಕಾತಿ

ಅರ್ಜಿ ಸಲ್ಲಿಸಲು ಫೆ.23 ಅಂತಿಮ ದಿನ

Published on:

ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯ ಅಂಗ ಸಂಸ್ಥೆಯಾಗಿರುವ ಹೈದರಾಬಾದ್‌ನ ಸೆಲ್ಯುಲಾರ್ ಮತ್ತು ಮಾಲಿಕ್ಯುಲರ್ ಬಯಾಲಜಿ ಕೇಂದ್ರ(CCMB)ದಲ್ಲಿ 50 ತಂತ್ರಜ್ಞ-1 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.23ರೊಳಗೆ ಅರ್ಜಿ ಸಲ್ಲಿಕೆಗಾಗಿ CCMB ಅಧಿಕೃತ ಜಾಲತಾಣ (https://www.ccmb.res.in/Careers/Regular-Positions)ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 27, 2026
  • ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 23, 2026
  • ಅರ್ಜಿಗಳ ಹಾರ್ಡ್ ಕಾಪಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ – ಮಾರ್ಚ್ 02, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 55% ಅಂಕಗಳೊಂದಿಗೆ ವಿಜ್ಞಾನ ವಿಷಯಗಳೊಂದಿಗೆ ಎಸ್‌ಎಸ್‌ಸಿ/10ನೇ ತರಗತಿ ಅಥವಾ ತತ್ಸಮಾನ ಅರ್ಹತೆಯೊಂದಿಗೆ NCVT/SCVT ಯಿಂದ ನೀಡಲಾದ ಆಯಾ ಟ್ರೇಡ್ ನಲ್ಲಿ ಐಟಿಐ ಉತ್ತೀರ್ಣರಾದ ಪ್ರಮಾಣಪತ್ರವನ್ನು ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವ ಇರಬೇಕು.

ವಯೋಮಿತಿ:

23-02-2026ರಂತೆ;

ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10-15 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಹಂತ-I: ಟ್ರೇಡ್‌ ಪರೀಕ್ಷೆ
  • ಹಂತ-II: ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಅಂತಿಮ ಮೆರಿಟ್ ಪಟ್ಟಿ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 39,545ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.
ಪ.ಜಾತಿ, ಪ.ಪಂಗಡ, ಮಹಿಳೆಯರು, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ವಿಧಾನ

•CCMB ಅಧಿಕೃತ ಜಾಲತಾಣ https://www.ccmb.res.in/Careers/Regular-Positions ಕ್ಕೆ ಭೇಟಿ ನೀಡಿ.

• ನಿಯಮಿತ ಹುದ್ದೆಗಳು ವಿಭಾಗದಲ್ಲಿ ನೀಡಲಾಗಿರುವ “CSIR-CCMB ಅಡ್ವ. ಸಂಖ್ಯೆ 01/2026 ರ ಅಡಿಯಲ್ಲಿ ತಂತ್ರಜ್ಞ (1)/ಗ್ರೇಡ್ II ಹುದ್ದೆಗಳಿಗೆ ಜಾಹೀರಾತು” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ “ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯ ಮೇಲೆ ಟ್ಯಾಪ್ ಮಾಡಿ.

• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿಗಳನ್ನು ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

• ಆನ್‌ಲೈನ್ ಅರ್ಜಿಯ ಹಾರ್ಡ್ ಪ್ರತಿಯನ್ನು ಸರಿಯಾಗಿ ಸಹಿ ಮಾಡಿ, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಮಾರ್ಚ್ 02ರೊಳಗೆ ತಲುಪುವಂತೆ ಕಳುಹಿಸಬೇಕು.

ವಿಳಾಸ: ವಿಭಾಗ ಅಧಿಕಾರಿ (ನೇಮಕಾತಿ ವಿಭಾಗ), ಸಿಎಸ್ಐಆರ್ – ಸೆಲ್ಯುಲರ್ ಅಂಡ್ ಮಾಲಿಕ್ಯುಲರ್ ಬಯಾಲಜಿ ಕೇಂದ್ರ, ಉಪ್ಪಲ್ ರಸ್ತೆ, ಹಬ್ಸಿಗುಡ, ಹೈದರಾಬಾದ್-500007, ತೆಲಂಗಾಣ

Important Direct Links:

Official Notification PDFDownload
Online Application Form LinkApply Now
Official Websitewww.ccmb.res.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment