CSIR-CCMBಯಲ್ಲಿ ವಿವಿಧ ಉದ್ಯೋಗಗಳು

Published on:

ಹೈದರಾಬಾದ್‌: ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯಡಿ ಕಾರ್ಯನಿರ್ವಹಿಸುವ ಸೆಲ್ಯುಲಾರ್ ಮತ್ತು ಅಣ್ವಿಕ ಜೀವಶಾಸ್ತ್ರ ಕೇಂದ್ರ(ಸಿಸಿಎಂಬಿ)ವು ಎರಡು ಪ್ರತ್ಯೇಕ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ತಂತ್ರಜ್ಞ-23, ಚಾಲಕ-01 ಹಾಗೂ ತಾಂತ್ರಿಕ ಅಧಿಕಾರಿ-04 ಸೇರಿದಂತೆ ಒಟ್ಟು 28 ಸ್ಥಾನಗಳಿಗೆ ನೇಮಕ ನಡೆಯಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಉದ್ಯೋಗಾಕಾಂಕ್ಷಿಗಳು ಮೇ 26ರೊಳಗೆ ಸಿಸಿಎಂಬಿ ಅಧಿಕೃತ ಜಾಲತಾಣ https://ccmb.res.in/jobs/ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 28, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 26, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 26, 2026
  • ಅರ್ಜಿಗಳ ಹಾರ್ಡ್ ಕಾಪಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 05, 2026

ಶೈಕ್ಷಣಿಕ ಅರ್ಹತೆ:

✓ತಂತ್ರಜ್ಞ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 55% ಅಂಕಗಳೊಂದಿಗೆ ವಿಜ್ಞಾನ ವಿಷಯಗಳೊಂದಿಗೆ ಎಸ್‌ಎಸ್‌ಸಿ/10ನೇ ತರಗತಿ/ತತ್ಸಮಾನ ಪದವಿ ಪೂರ್ಣಗೊಳಿಸಬೇಕು ಮತ್ತು ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.

✓ಚಾಲಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ ಮಾನ್ಯವಾದ LMV ಮತ್ತು HMV ಚಾಲನಾ ಪರವಾನಗಿಯನ್ನು ಹೊಂದಿರಬೇಕು.

✓ತಾಂತ್ರಿಕ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 55% ಅಂಕಗಳೊಂದಿಗೆ ಹಾಸ್ಪಿಟಾಲಿಟಿ ಅಡ್ಮಿನಿಸ್ಟ್ರೇಷನ್/ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನಲ್ಲಿ ಎಂ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

26-05-2026ರಂತೆ;

ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು

ಗರಿಷ್ಠ ವಯಸ್ಸಿನ ಮಿತಿ – ತಂತ್ರಜ್ಞ ಹುದ್ದೆಗೆ 28 ವರ್ಷಗಳು, ಚಾಲಕ ಹುದ್ದೆಗೆ 27 ವರ್ಷಗಳು, ತಾಂತ್ರಿಕ ಅಧಿಕಾರಿ ಹುದ್ದೆಗೆ 30 ವರ್ಷಗಳು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿರಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ;

ಸ್ಕಿಲ್(ಕೌಶಲ್ಯ)/ಟ್ರೇಡ್ ಪರೀಕ್ಷೆ
ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ

ಸಂಬಳ:

ತಂತ್ರಜ್ಞ ಹುದ್ದೆಗಳಿಗೆ ₹39,970/-
ಚಾಲಕ ಹುದ್ದೆಗಳಿಗೆ ₹39,970/-
ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ₹91,070/-

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹500
ಪ.ಜಾತಿ, ಪ.ಪಂಗಡ, ಮಹಿಳೆಯರು, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ.?

• CCMB ಅಧಿಕೃತ ಜಾಲತಾಣ https://ccmb.res.in/jobs/ ಕ್ಕೆ ಭೇಟಿ ನೀಡಿ.

• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ/ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಅರ್ಜಿ ಸಲ್ಲಿಸುವ ಹಂತಗಳನ್ನು ಪೂರ್ಣಗೊಳಿಸಿ.

• ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

ಗಮನಿಸಿ: ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆ ಜೊತೆಗೆ ಸಂಬಂಧಿತ ದಾಖಲೆಗಳನ್ನು ಜೊತೆಗೆ ಲಗತ್ತಿಸಿ ಹಾಗೂ ಸ್ಪಷ್ಟವಾಗಿ ಯಾವ ಹುದ್ದೆಗೆ ಎಂದು ಲಕೋಟೆಯಲ್ಲಿ ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ತಲುಪಿಸಬೇಕು (ಖುದ್ದಾಗಿ ಭೇಟಿ ನೀಡಿ ಸಲ್ಲಿಸುವಂತಿಲ್ಲ).

ವಿಭಾಗ ಅಧಿಕಾರಿ (ನೇಮಕಾತಿ ವಿಭಾಗ),
ಸಿಎಸ್ಐಆರ್-ಕೋಶೀಯ ಮತ್ತು ಆಣ್ವಿಕ ಜೀವಶಾಸ್ತ್ರ ಕೇಂದ್ರ,
ಉಪ್ಪಲ್ ರಸ್ತೆ, ಹಬ್ಸಿಗುಡ,
ಹೈದರಾಬಾದ್ – 500007,
ತೆಲಂಗಾಣ

Important Direct Links:

Official Notification PDF(Technician and Driver)Download
Official Notification PDF(Technical Officer)Download
Technician and Driver Online Application Form LinkApply Now
Technical Officer Online Application Form LinkApply Now
Official Websiteccmb.res.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment