ಕೇಂದ್ರೀಯ ಗಣಿಗಾರಿಕೆ ಮತ್ತು ಇಂಧನ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ

Published on:

ಧನ್‌ಬಾದ್‌(ಜಾರ್ಖಂಡ್‌): ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(ಸಿಎಸ್‌ಐಆರ್‌) ಅಧೀನದ ಪ್ರಯೋಗಾಲಯವಾದ ಕೇಂದ್ರೀಯ ಗಣಿಗಾರಿಕೆ ಮತ್ತು ಇಂಧನ ಸಂಶೋಧನಾ ಸಂಸ್ಥೆ(ಸಿಐಎಂಎಫ್‌ಆರ್‌)ಯಲ್ಲಿ ನಾನಾ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ.

ಇನ್ಸ್ಟ್ರುಮೆಂಟ್ಸ್ ಮೆಕ್ಯಾನಿಕ್, ಸರ್ವೆ, ಫಿಟ್ಟರ್, ವೆಲ್ಡರ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್ ಹಾಗೂ ರೆಫ್ರಿಜರೇಷನ್ ಅಂಡ್ ಏರ್ ಕಂಡೀಶನ್ ಸೇರಿದಂತೆ ಇತರೆ ವಿಭಾಗಗಳಿಗೆ ಒಟ್ಟು 30 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಮೇ 20ರಿಂದ ಜೂ.19ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ https://devapps.ngri.res.in/CIMFR_group2_2026/index.jsp ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 20, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 19, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 17, 2026

ವಿಭಾಗವಾರು ಖಾಲಿ ಇರುವ ಹುದ್ದೆಗಳ ವಿವರ:

ಇನ್ಸ್ಟ್ರುಮೆಂಟ್ಸ್ ಮೆಕಾನಿಕ್ಸ್ 03 ಹುದ್ದೆಗಳು
ಸರ್ವೆ 03 ಹುದ್ದೆಗಳು
ಫಿಟ್ಟರ್ 05 ಹುದ್ದೆಗಳು
ವೆಲ್ಡರ್ 02 ಹುದ್ದೆಗಳು
ಕಾರ್ಪೆಂಟರ್ 01 ಹುದ್ದೆ
ಎಲೆಕ್ಟ್ರಿಷಿಯನ್ 07 ಹುದ್ದೆಗಳು
ವೈರ್ ಮೆನ್ 01 ಹುದ್ದೆ
ರೆಫ್ರಿಜರೇಷನ್ ಅಂಡ್ ಏರ್ ಕಂಡೀಶನ್ 02 ಹುದ್ದೆಗಳು
DRAUGHTSMAN (CIVIL) 01 ಹುದ್ದೆ
ಆಟೋಮೊಬೈಲ್/ಮೆಕ್ಯಾನಿಕ್ ಮೋಟಾರ್ ವೆಹಿಕಲ್ 02 ಹುದ್ದೆಗಳು
DRAUGHTSMAN (MECHANICAL) 03 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 55% ಅಂಕಗಳೊಂದಿಗೆ ವಿಜ್ಞಾನ ವಿಷಯಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು. ಹಾಗೂ NCVT/SCVT ಯಿಂದ ನೀಡಲಾದ ಆಯಾ ಟ್ರೇಡ್ ನಲ್ಲಿ ITI ಉತ್ತೀರ್ಣರಾದ ಪ್ರಮಾಣ ಪತ್ರದೊಂದಿಗೆ ಸಂಬಂಧಿತ ವಿಭಾಗದಲ್ಲಿ ಕನಿಷ್ಠ 03 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

19-06-2026ರಂತೆ;

ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 28 ವರ್ಷಗಳು.

ವಯೋಮಿತಿ ಸಡಿಲಿಕೆ: ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಇಲಾಖೆಯ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಟ್ರೇಡ್ ಪರೀಕ್ಷೆ
  • ಲಿಖಿತ ಪರೀಕ್ಷೆ
  • ಅಂತಿಮ ಮೆರಿಟ್ ಪಟ್ಟಿ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹19,900-₹63,200ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹500
ಪ.ಜಾತಿ, ಪ.ಪಂಗಡ, ಮಹಿಳೆಯರು, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು CIMFR ಅಧಿಕೃತ ಜಾಲತಾಣ https://devapps.ngri.res.in/CIMFR_group2_2026/index.jspಕ್ಕೆ ಭೇಟಿ ನೀಡಿ.

• ನಂತರ ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ನಂತರ ಅರ್ಜಿಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿಗಳನ್ನು ನಮೂದಿಸಿ. ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websitehttps://cimfr.res.in/
More UpdatesKarnatakaHelp.in

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment