ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ಅಂಗಸಂಸ್ಥೆಯಾಗಿರುವ ಚಂಡೀಗಢ್ನ ಕೇಂದ್ರೀಯ ವೈಜ್ಞಾನಿಕ ಉಪಕರಣ ಸಂಸ್ಥೆ(CSIO)ಯು ತಂತ್ರಜ್ಞಾನೇತರ ಗ್ರೂಪ್ ‘ಸಿ’ ಬಹುಕಾರ್ಯಕ ಸಿಬ್ಬಂದಿ(MTS)ಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 07 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು CSIR ಅಧಿಕೃತ ಜಾಲತಾಣ https://career.csio.res.in/RegularMTS2025/ಕ್ಕೆ ಭೇಟಿ ನೀಡಿ, ಫೆ.09ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 09, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ:
09-02-2026 ರoತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ವಯೋಮಿತಿ ಸಡಿಲಿಕೆ; ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಟ್ರೇಡ್ ಪರೀಕ್ಷೆ
ಲಿಖಿತ ಪರೀಕ್ಷೆ
ಅಂತಿಮ ಮೆರಿಟ್ ಪಟ್ಟಿ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ 18,000ರೂ-56,900ರೂ.ವರೆಗೆ ಮಾಹೆಯಾನ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 590ರೂ. ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?
• ಮೊದಲಿಗೆ ಅಭ್ಯರ್ಥಿಗಳು CSIR ಅಧಿಕೃತ ಜಾಲತಾಣ https://career.csio.res.in/RegularMTS2025ಕ್ಕೆ ಭೇಟಿ ನೀಡಿ.
• ಬಹು ಕಾರ್ಯಕಾರಿ ಸಿಬ್ಬಂದಿ ನೇಮಕಾತಿ – “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.