ಭುವನೇಶ್ವರಂ: ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯಡಿ ಬರುವ ಪ್ರಮುಖ ಸಂಶೋಧನಾ ಸಂಸ್ಥೆಯಾಗಿರುವ ಖನಿಜ ಮತ್ತು ವಸ್ತು ತಂತ್ರಜ್ಞಾನ ಸಂಸ್ಥೆ(IMMT)ಯು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಒಟ್ಟು 07 ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಏ.21ರವರೆಗೆ ಅವಕಾಶವಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 25 ವರ್ಷದೊಳಗಿನ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಐಎಂಎಂಟಿ ಅಧಿಕೃತ ಜಾಲತಾಣ https://www.immt.res.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 21, 2026
ಶೈಕ್ಷಣಿಕ ಅರ್ಹತೆ:
IMMT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಪೇಕ್ಷಣೀಯ ಅರ್ಹತೆ: ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
21-04-2026 ರಂತೆ;
ಕನಿಷ್ಠ ಮಿತಿ 18 ವರ್ಷಗಳು, ಗರಿಷ್ಠ ಮಿತಿ 25 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷಗಳು, ಪ. ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10-15 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಮೆರಿಟ್ ಲಿಸ್ಟ್
ಕೌಶಲ್ಯ ಪರೀಕ್ಷೆ/ಪ್ರಾಥಮಿಕ ಪರೀಕ್ಷೆ/ವ್ಯಾಪಾರ ಪರೀಕ್ಷೆ/ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ಸಂಬಳ:
ಅಭ್ಯರ್ಥಿಗಳಿಗೆ ₹18,000-56,900ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹500 ಪ.ಜಾತಿ, ಪ.ಪಂಗಡ, ಮಹಿಳೆಯರು, ವಿಕಲಚೇತನರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು IMMT ಅಧಿಕೃತ ಜಾಲತಾಣ https://recruitment.immt.res.in/ ಕ್ಕೆ ಭೇಟಿ ನೀಡಿ.
• “ಅಡ್ವೊಟ್. ಸಂಖ್ಯೆ 02/2026” ವಿಭಾಗದ ಕೆಳಗೆ ನೀಡಲಾಗಿರುವ *ಈಗಲೇ ಅರ್ಜಿ ಸಲ್ಲಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿಗಳನ್ನು ನಮೂದಿಸಿ. ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.