CSIR-NAL Vacancy 2025: ಬೆಂಗಳೂರಿನ ರಾಷ್ಟ್ರೀಯ ಅಂತರಿಕ್ಷಯಾನ ಪ್ರಯೋಗಾಲಯ (CISR) NAL ನಲ್ಲಿ ಖಾಲಿ ಇರುವ ತಂತ್ರಜ್ಞ-1 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಟೆಕ್ನಿಷಿಯನ್, ತಂತ್ರಜ್ಞ , ಫಿಟ್ಟರ್, ವೆಲ್ಡರ್ ಹಾಗೂ ಇತರೆ ಒಟ್ಟು 86 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು CISR NAL ಅಧಿಕೃತ ವೆಬ್ಸೈಟ್ https://nal.res.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ – 01 ಹುದ್ದೆ
ಮೆಕ್ಯಾನಿಕಲ್ – 01 ಹುದ್ದೆ
ಎಲೆಕ್ಟ್ರಾನಿಕ್ಸ್ -11 ಹುದ್ದೆಗಳು
ಡ್ರಾಟ್ಸ್‌ಮನ್ (ಮೆಕ್ಯಾನಿಕಲ್) – 05 ಹುದ್ದೆಗಳು
ಪ್ರಯೋಗಾಲಯ ಸಹಾಯಕ (ರಾಸಾಯನಿಕ ಸ್ಥಾವರ) – 01 ಹುದ್ದೆ
ಒಟ್ಟು 86 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಹಾವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 55% ಅಂಕಗಳೊಂದಿಗೆ 10ನೇ ತರಗತಿ(ವಿಜ್ಞಾನ ವಿಷಯಗಳೊಂದಿಗೆ) ಪಾಸ್ ಜೊತೆಗೆ ಸಂಬಂಧಿತ ವಿಭಾಗದಲ್ಲಿ ಐಟಿಐ. ಹಾಗೂ ಕೆಲವು ಹುದ್ದೆಗಳಿಗೆ ನಿಗದಿತ ಅನುಭವ ಹೊಂದಿರಬೇಕು. (ಹೆಚ್ಚಿನ ಮಾಹಿತಿಗಾಗಿ ಕಡ್ಡಾಯವಾಗಿ ಅಧಿಕೃತ ಅಧಿಸೂಚನೆ ನೋಡಿ, ಲಿಂಕ್ ಕೊನೆಯಲ್ಲಿ ನೀಡಲಾಗಿದೆ)
ವಯೋಮಿತಿ:
ದಿನಾಂಕ 10-07-2025 ರಂತೆ ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು.
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 – 63,200 ರೂ. ವರೆಗೆ ಮಾಸಿಕ ವೇತನ ನೀಡಲಾಗುವುದು.
ಅಂದಾಜು ಒಟ್ಟು ವೇತನ ತಿಂಗಳಿಗೆ – 38,500ರೂ.
ಆಯ್ಕೆ ಪ್ರಕ್ರಿಯೆ:
ಟ್ರೇಡ್ / ಕೌಶಲ್ಯ ಪರೀಕ್ಷೆ
ಲಿಖಿತ ಪರೀಕ್ಷೆ(Written Examination)
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 500 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
CISR NAL ಅಧಿಕೃತ ವೆಬ್ಸೈಟ್ https://recruit.nal.res.in/register.aspx ಗೆ ಭೇಟಿ ನೀಡಿ.
ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ಅರ್ಜಿ ಶುಲ್ಕ ಪಾವತಿ ಮಾಡಿ. (ಅನ್ವಯಿಸಿದರೆ)
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.