CSIR NCL Technician 1 and Technical Assistant Notification 2025
ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ಅಧೀನದ ರಾಷ್ಟ್ರೀಯ ರಾಸಾಯನಿಕ ಪ್ರಯೋಗಾಲಯ(NCL)ವು ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ತಂತ್ರಜ್ಞ-I 15 ಹುದ್ದೆ ಹಾಗೂ ತಾಂತ್ರಿಕ ಸಹಾಯಕ 19 ಹುದ್ದೆ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಬಿಎಸ್ಸಿ ಉದ್ಯೋಗಾಕಾಂಕ್ಷಿಗಳು ಜ.12ರೊಳಗೆ CISR ಅಧಿಕೃತ ಜಾಲತಾಣದ ಲಿಂಕ್ https://rectt.ngri.res.in/NCL_Group_2_3_2025/ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ – ಜನವರಿ 12, 2026
ಶೈಕ್ಷಣಿಕ ಅರ್ಹತೆ:
✓ ತಂತ್ರಜ್ಞ-I ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ತರಗತಿಯಲ್ಲಿ ವಿಜ್ಞಾನ ವಿಷಯದೊಂದಿಗೆ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರ ಅಥವಾ ರಾಷ್ಟ್ರೀಯ/ರಾಜ್ಯ ವ್ಯಾಪಾರ(ಟ್ರೇಡ್) ಪ್ರಮಾಣಪತ್ರವನ್ನು ಹೊಂದಿರಬೇಕು.
✓ ತಾಂತ್ರಿಕ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಬಿ.ಎಸ್ಸಿ/ತತ್ಸಮಾನ ಪದವಿ/ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
12-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ವಯೋಮಿತಿ ಸಡಿಲಿಕೆ: ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ -05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:
• ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ • ಟ್ರೇಡ್ ಪರೀಕ್ಷೆ • ಪೇಪರ್-II ಮತ್ತು ಪೇಪರ್-III ಪರೀಕ್ಷೆ • ಅಂತಿಮ ಮೆರಿಟ್ ಪಟ್ಟಿ • ದಾಖಲೆ ಪರಿಶೀಲನೆ
ಸಂಬಳ:
ತಂತ್ರಜ್ಞ-I ಹುದ್ದೆಗಳಿಗೆ – ಒಟ್ಟು ವೇತನ (19,900-63,200) ಅಂದಾಜು 40,000ರೂ. ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ – ಒಟ್ಟು ವೇತನ (35,400-1,12,400) ಅಂದಾಜು 72,000ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ. ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಹಿಳಾ, ಮಾಜಿ ಸೈನಿಕರು ಹಾಗೂ ಸಿ.ಐ.ಎಸ್.ಆರ್ ಕಾಯಂ ಉದ್ಯೋಗಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ.?
• CISR ಅಧಿಕೃತ ಜಾಲತಾಣದ ಲಿಂಕ್ https://rectt.ngri.res.in/NCL_Group_2_3_2025/ಗೆ ಭೇಟಿ ನೀಡಿ.
• ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ತೆಗೆದುಕೊಳ್ಳಿ.