CSIR NCLನಲ್ಲಿ ತಾಂತ್ರಿಕ ಸಿಬ್ಬಂದಿಗಳ ಭರ್ತಿ

ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಬಿಎಸ್ಸಿ ಅಭ್ಯರ್ಥಿಗಳಿಗೆ ಆದ್ಯತೆ | ಪುಣೆಯಲ್ಲಿ ನಿಯೋಜನೆ

Published on:

ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ಅಧೀನದ ರಾಷ್ಟ್ರೀಯ ರಾಸಾಯನಿಕ ಪ್ರಯೋಗಾಲಯ(NCL)ವು ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ತಂತ್ರಜ್ಞ-I 15 ಹುದ್ದೆ ಹಾಗೂ ತಾಂತ್ರಿಕ ಸಹಾಯಕ 19 ಹುದ್ದೆ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಬಿಎಸ್ಸಿ ಉದ್ಯೋಗಾಕಾಂಕ್ಷಿಗಳು ಜ.12ರೊಳಗೆ CISR ಅಧಿಕೃತ ಜಾಲತಾಣದ ಲಿಂಕ್‌ https://rectt.ngri.res.in/NCL_Group_2_3_2025/ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಡಿಸೆಂಬರ್ 12, 2025
  • ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ – ಜನವರಿ 12, 2026

ಶೈಕ್ಷಣಿಕ ಅರ್ಹತೆ:

✓ ತಂತ್ರಜ್ಞ-I ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ತರಗತಿಯಲ್ಲಿ ವಿಜ್ಞಾನ ವಿಷಯದೊಂದಿಗೆ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರ ಅಥವಾ ರಾಷ್ಟ್ರೀಯ/ರಾಜ್ಯ ವ್ಯಾಪಾರ(ಟ್ರೇಡ್) ಪ್ರಮಾಣಪತ್ರವನ್ನು ಹೊಂದಿರಬೇಕು.

✓ ತಾಂತ್ರಿಕ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಬಿ.ಎಸ್ಸಿ/ತತ್ಸಮಾನ ಪದವಿ/ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

12-01-2026 ರಂತೆ;

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು

ವಯೋಮಿತಿ ಸಡಿಲಿಕೆ: ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ -05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು

ಆಯ್ಕೆ ವಿಧಾನ:

• ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
• ಟ್ರೇಡ್ ಪರೀಕ್ಷೆ
• ಪೇಪರ್-II ಮತ್ತು ಪೇಪರ್-III ಪರೀಕ್ಷೆ
• ಅಂತಿಮ ಮೆರಿಟ್ ಪಟ್ಟಿ
• ದಾಖಲೆ ಪರಿಶೀಲನೆ

ಸಂಬಳ:

ತಂತ್ರಜ್ಞ-I ಹುದ್ದೆಗಳಿಗೆ – ಒಟ್ಟು ವೇತನ (19,900-63,200) ಅಂದಾಜು 40,000ರೂ. ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ – ಒಟ್ಟು ವೇತನ (35,400-1,12,400) ಅಂದಾಜು 72,000ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಹಿಳಾ, ಮಾಜಿ ಸೈನಿಕರು ಹಾಗೂ ಸಿ.ಐ.ಎಸ್.ಆರ್ ಕಾಯಂ ಉದ್ಯೋಗಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ.?

• CISR ಅಧಿಕೃತ ಜಾಲತಾಣದ ಲಿಂಕ್‌ https://rectt.ngri.res.in/NCL_Group_2_3_2025/ಗೆ ಭೇಟಿ ನೀಡಿ.

• ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.csir.res.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment