ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಡಿಸೆಂಬರ್-2025ರ ಜಂಟಿ CSIR UGC-NET ಪರೀಕ್ಷೆಗೆ ಸೆ.25ರಂದು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್, ಪಿಎಚ್ಡಿ ಪ್ರವೇಶ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆ ಇದಾಗಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹರು ಸಂಸ್ಥೆಯ ಅಧಿಕೃತ ವೆಬ್ಸೈಟ್ https://csirnet.nta.nic.in/ನ ಮೂಲಕ ಅ.24ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ – 325ರೂ.
ಪರೀಕ್ಷೆ ದಿನಾಂಕ:
UGC – NET ಡಿಸೆಂಬರ್-2025ರ (ಜೂನಿಯರ್ ರಿಸರ್ಚ್ ಫೆಲೋಶಿಪ್, ಪಿಎಚ್ಡಿ ಪ್ರವೇಶ ಮತ್ತು ಸಹಾಯಕ ಪ್ರಾಧ್ಯಾಪಕ) ಹುದ್ದೆಗಳಿಗೆ ಅರ್ಹತೆಯನ್ನು ಪಡೆಯಲು ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಡಿಸೆಂಬರ್ 18ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ (ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ) ಎರಡು ಪಾಳಿಗಳಲ್ಲಿ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ
• NTA ಅಧಿಕೃತ ವೆಬ್ಸೈಟ್ https://csirnet.nta.nic.in/ ಗೆ ಭೇಟಿ ನೀಡಿ.
• ನಂತರ ಅಭ್ಯರ್ಥಿ ಚಟುವಟಿಕೆ ವಿಭಾಗದ ಕೆಳಗೆ ನೀಡಲಾಗಿರುವ – “ಜಂಟಿ CSIR UGC-NET ಡಿಸೆಂಬರ್ 2025 ಕ್ಕೆ ನೋಂದಣಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಅಪ್ಲಿಕೇಶನ್ ಸಂಖ್ಯೆ, ಪಾಸ್ವರ್ಡ್ ಹಾಗೂ ಕ್ಯಾಪ್ಚ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಇತ್ತೀಚಿನ ಛಾಯಾಚಿತ್ರ (10-200 KB) ಮತ್ತು ಸಹಿ (4-30 KB) ಅಪ್ಲೋಡ್ ಮಾಡಿ.
• ಬಳಿಕ ಅರ್ಜಿ ಶುಲ್ಕ ಪಾವತಿ ಮಾಡಿ. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಳ್ಳಿ.