CSIR UGC-NET ಡಿಸೆಂಬರ್ 2025ರ ಪರೀಕ್ಷೆಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

Published on:

Updated On:

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಡಿಸೆಂಬರ್-2025ರ ಜಂಟಿ CSIR UGC-NET ಪರೀಕ್ಷೆಗೆ ಸೆ.25ರಂದು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.

ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್, ಪಿಎಚ್‌ಡಿ ಪ್ರವೇಶ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆ ಇದಾಗಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹರು ಸಂಸ್ಥೆಯ ಅಧಿಕೃತ ವೆಬ್‌ಸೈಟ್ https://csirnet.nta.nic.in/ನ ಮೂಲಕ ಅ.24ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

CSIR UGC-NET ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 25, 2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – ಅಕ್ಟೋಬರ್ 24, 2025
  • ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಅಕ್ಟೋಬರ್ 25, 2025
  • ಅರ್ಜಿಯನ್ನು ತಿದ್ದುಪಡಿ ಮಾಡಲು ಕೊನೆಯ ದಿನಾಂಕ – ಅಕ್ಟೋಬರ್ 27-29, 2025
  • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಯುವ ದಿನಾಂಕ – ಡಿಸೆಂಬರ್ 18, 2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳು/ ಸಂಸ್ಥೆಗಳಿಂದ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಒಬಿಸಿ-ಎನ್‌ಸಿಎಲ್/ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ತೃತೀಯ ಲಿಂಗ ಅಭ್ಯರ್ಥಿಗಳಿಗೆ 50% ಅಂಕಗಳೊಂದಿಗೆ 4 ವರ್ಷಗಳ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

01-12-2025 ರಂತೆ;

✓ ಜೆ.ಆರ್.ಎಫ್ ಪರೀಕ್ಷೆಗೆ – ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು.

ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗ ಮತ್ತು ಮಹಿಳಾ ಅರ್ಜಿದಾರರಿಗೆ – 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

✓ ಪಿಎಚ್‌ಡಿ ಪ್ರವೇಶ ಹಾಗೂ ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪರೀಕ್ಷೆಗೆ – ಯಾವುದೇ ಗರಿಷ್ಠ ವಯಸ್ಸಿನ ಮಿತಿಯಿಲ್ಲ

ಒಟ್ಟು ಪರೀಕ್ಷಾ ಪತ್ರಿಕೆಗಳು:

  • ರಾಸಾಯನಿಕ ವಿಜ್ಞಾನ
  • ಭೂಮಿ, ವಾತಾವರಣ. ಸಾಗರ ಮತ್ತು ಗ್ರಹಗಳ ವಿಜ್ಞಾನಗಳು
  • ಲೈಫ್ ಸೈನ್ಸಸ್
  • ಗಣಿತ ವಿಜ್ಞಾನ
  • ಭೌತಿಕ ವಿಜ್ಞಾನ

ಆಯ್ಕೆ ವಿಧಾನ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಅರ್ಹತಾ ಪಟ್ಟಿ

ಪರೀಕ್ಷಾ ಶುಲ್ಕ:

  • ಸಾಮಾನ್ಯ/ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ – 1150ರೂ.
  • ಜನರಲ್-ಇಡಬ್ಲ್ಯೂಎಸ್/ಒಬಿಸಿ-ಎನ್‌ಸಿಎಲ್ ಅಭ್ಯರ್ಥಿಗಳಿಗೆ – 600ರೂ.
  • ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ – 325ರೂ.

ಪರೀಕ್ಷೆ ದಿನಾಂಕ:

UGC – NET ಡಿಸೆಂಬರ್-2025ರ (ಜೂನಿಯರ್ ರಿಸರ್ಚ್ ಫೆಲೋಶಿಪ್, ಪಿಎಚ್‌ಡಿ ಪ್ರವೇಶ ಮತ್ತು ಸಹಾಯಕ ಪ್ರಾಧ್ಯಾಪಕ) ಹುದ್ದೆಗಳಿಗೆ ಅರ್ಹತೆಯನ್ನು ಪಡೆಯಲು ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಡಿಸೆಂಬರ್ 18ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ (ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ) ಎರಡು ಪಾಳಿಗಳಲ್ಲಿ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ

• NTA ಅಧಿಕೃತ ವೆಬ್‌ಸೈಟ್ https://csirnet.nta.nic.in/ ಗೆ ಭೇಟಿ ನೀಡಿ.

• ನಂತರ ಅಭ್ಯರ್ಥಿ ಚಟುವಟಿಕೆ ವಿಭಾಗದ ಕೆಳಗೆ ನೀಡಲಾಗಿರುವ – “ಜಂಟಿ CSIR UGC-NET ಡಿಸೆಂಬರ್ 2025 ಕ್ಕೆ ನೋಂದಣಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಅಪ್ಲಿಕೇಶನ್ ಸಂಖ್ಯೆ, ಪಾಸ್ವರ್ಡ್ ಹಾಗೂ ಕ್ಯಾಪ್ಚ ನಮೂದಿಸಿ ಲಾಗಿನ್ ಆಗಿ.

• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಇತ್ತೀಚಿನ ಛಾಯಾಚಿತ್ರ (10-200 KB) ಮತ್ತು ಸಹಿ (4-30 KB) ಅಪ್‌ಲೋಡ್ ಮಾಡಿ.

• ಬಳಿಕ ಅರ್ಜಿ ಶುಲ್ಕ ಪಾವತಿ ಮಾಡಿ. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

Important Direct Links:

CSIR UGC NET December 2025 Notification PDFDownload
CSIR UGC NET December 2025 Online Form LinkApply Now
Official Websitecsirnet.nta.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.