ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) CSIR UGC ಜಂಟಿ NET ಪರೀಕ್ಷೆಯ ಫಲಿತಾಂಶಗಳನ್ನು ಇಂದು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಜಂಟಿ ಸಿಎಸ್‌ಐಆರ್ ಯುಜಿಸಿ ನೆಟ್ ಅಂತಿಮ ಉತ್ತರ ಕೀ 2024 ಅನ್ನು csirnet.nta.ac.in ಗಂಟೆಗೆ ಡೌನ್ಲೋಡ್ ಮಾಡಬಹುದು.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಭೂಮಿ, ವಾತಾವರಣ, ಸಾಗರ ಮತ್ತು ಗ್ರಹ ವಿಜ್ಞಾನ, ಭೌತಿಕ ವಿಜ್ಞಾನ ಗಣಿತ ವಿಜ್ಞಾನ, ಜೀವ ವಿಜ್ಞಾನ ಮತ್ತು ರಾಸಾಯನಿಕ ವಿಜ್ಞಾನಗಳಂತಹ ವಿಷಯಗಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.
ಈ ವರ್ಷದ ಪರೀಕ್ಷೆಗೆ 2,25 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅದರೆ 1,63,ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯನ್ನು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಜುಲೈ 25, 26 ಮತ್ತು 27, 2024 ರಂದು 187 ನಗರಗಳಲ್ಲಿ 348 ಕೇಂದ್ರಗಳಲ್ಲಿ ನಡೆಸಲಾಯಿತು.
Csir Ugc Net Result 2024
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಲು NTA ಅಧಿಕೃತ ವೆಬ್ ಸೈಟ್ csirnet.nta.ac.in ಗೆ ಭೇಟಿ ನೀಡಿ, ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
NTA (CSIR) UGC NET ಪರೀಕ್ಷೆಯ ಫಲಿತಾಂಶವನ್ನು ಪಡೆದುಕೊಳ್ಳುವುದು ಹೇಗೆ…?
ಮೊದಲಿಗೆ ಅಧಿಕೃತ ವೆಬ್ ಸೈಟ್ csirnet.nta.ac.in ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ “Public Notices” ನಲ್ಲಿ DECLARATION OF SCORES OF THE JOINT CSIR-UGC NET JULY, 2024 ಕ್ಲಿಕ್ ಮಾಡಿ.
ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ.
ಫಲಿತಾಂಶದ PDF ತೆರೆದುಕೊಳ್ಳುತ್ತದೆ ಅದನ್ನು ಡೌನ್ಲೋಡ್ ಮಾಡಿ.