ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಫೆ.08ರಂದು ನಡೆಸಲಿರುವ 21ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET)2026ರ ಪರೀಕ್ಷಾ ದಿನಾಂಕ ಹಾಗೂ ನಗರ ಮಾಹಿತಿ ಕುರಿತು ಮುಂಗಡ ಮಾಹಿತಿಯನ್ನು ಬಿಡುಗಡೆಗೊಳಿಸಿದೆ.
ಪತ್ರಿಕೆ ಎರಡು, ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12ರವರೆಗೆ ಮತ್ತು ಪತ್ರಿಕೆ ಒಂದು, ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 132 ನಗರಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 20 ಭಾಷೆಗಳಲ್ಲಿ ನಡೆಯಲಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://ctet.nic.in/ಕ್ಕೆ ಭೇಟಿ ನೀಡಿ, ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪರೀಕ್ಷೆ ದಿನಾಂಕ, ಪರೀಕ್ಷಾ ನಗರದ ಮಾಹಿತಿಯನ್ನು ಪರಿಶೀಲಿಸಬಹುದು.



