CTET July 2024 Result: ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಸಂಬಂಧಿಸಿದ ಫಲಿತಾಂಶಗಳನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಬಿಡುಗಡೆ ಮಾಡಿದೆ.
CTET ಜುಲೈ ಪರೀಕ್ಷೆಯನ್ನು 2024 ಜುಲೈ 7 ರಂದು ದೇಶದಾದ್ಯಂತ 136 ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಿತು – ಪತ್ರಿಕೆ 2 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಪತ್ರಿಕೆ 1 ಮಧ್ಯಾಹ್ನ 2 ರಿಂದ 4:30 ರವರೆಗೆ ನಡೆಸಲಾಗಿತ್ತು.ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ctet.nic.in ಮೂಲಕ ಫಲಿತಾಂಶಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಲೇಖನದಲ್ಲಿ ಫಲಿತಾಂಶಗಳನ್ನು ಅನ್ ಲೈನ್ ಮೂಲಕ ಡೌನಲೋಡ್ ಮಾಡುವುದು ಹೇಗೆ ಎಂಬ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.