ಸಿಟಿಇಟಿ ಸೆಪ್ಟೆಂಬರ್ 2026ರ ನೋಂದಣಿ ಆರಂಭ

Published on:

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 2026ನೇ ಸಾಲಿನ ಸೆಪ್ಟೆಂಬರ್ ಮಾಹೆಯ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ(ಸಿಟಿಇಟಿ) ನೋಂದಣಿಗೆ ಅರ್ಜಿ ಆಹ್ವಾನಿಸಿದೆ.

ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳಂತಹ ಕೇಂದ್ರ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆಯನ್ನು ಪಡೆಯಲು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯ ನೋಂದಣಿಗಾಗಿ ಜೂ.10ರವೆರೆಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಸಿಟಿಇಟಿ ಅಧಿಕೃತ ಜಾಲತಾಣ https://ctet.nic.in/ ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಮೇ 11, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 10, 2026
  • ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 10, 2026
  • (ಪೇಪರ್-I ಮತ್ತು ಪೇಪರ್-II) ಪರೀಕ್ಷಾ ದಿನಾಂಕ – ಸೆಪ್ಟೆಂಬರ್ 06, 2026

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

✓ 1 ರಿಂದ 05ನೇ ತರಗತಿ ಶಿಕ್ಷಕ; ಪತ್ರಿಕೆ-1 ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ/12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಡಿ.ಎಲ್.ಎಡ್/ಜೆ.ಬಿ.ಟಿ/ಬಿ.ಎಲ್.ಎಡ್/ಬಿ.ಎಡ್ ಬೋಧನಾ ಅರ್ಹತೆಯನ್ನು ಹೊಂದಿರಬೇಕು.

✓ 6 ರಿಂದ 8ನೇ ತರಗತಿ ಶಿಕ್ಷಕ; ಪತ್ರಿಕೆ-2 ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ವಗೊಳಿಸಿರಬೇಕು ಜೊತೆಗೆ ಬಿ.ಎಡ್/ಬಿ.ಎಲ್.ಎಡ್ ಬೋಧನಾ ಅರ್ಹತೆಯನ್ನು ಹೊಂದಿರಬೇಕು.

ಹೆಚ್ಚಿನ ಅರ್ಹತೆಯ ವಿವರಗಳಿಗೆ ಅಭ್ಯರ್ಥಿಗಳು ತಪ್ಪದೆ NCTE ವೆಬ್‌ಸೈಟ್ https://ncte.gov.in ಗೆ ಭೇಟಿ ನೀಡಿ.

CTET-2026 ಪರೀಕ್ಷಾ ವೇಳಾಪಟ್ಟಿ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು2026ನೇ ಸಾಲಿನ ಸೆಪ್ಟೆಂಬರ್ ಮಾಹೆಯ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಅನ್ನು 2026ರ ಸೆಪ್ಟೆಂಬರ್ 06 ರಂದು (ಭಾನುವಾರ) ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ಪೇಪರ್-II ಪರೀಕ್ಷೆಯನ್ನು ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ ಪೇಪರ್-I ಪರೀಕ್ಷೆಯನ್ನು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 27 ಭಾಷೆಗಳಲ್ಲಿ ನಡೆಸಲಾಗುತ್ತದೆ.

ಅಭ್ಯರ್ಥಿಗಳಿಗೆ ವಿಶೇಷ ಸೂಚನೆ – ಸಿಟಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾದರೆ ಪರೀಕ್ಷೆಯನ್ನು ಸೆಪ್ಟೆಂಬರ್ 05 ರಂದು (ಶನಿವಾರ) ನಡೆಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ಆಯ್ಕೆ ವಿಧಾನ:

CTET-2026 ಉತ್ತೀರ್ಣ/ಅರ್ಹತೆಯನ್ನು ಪಡೆಯಲು (ಪೇಪರ್-I/ ಪೇಪರ್-II) ಪರೀಕ್ಷೆಯಲ್ಲಿ ಮೀಸಲಾತಿ ಅನ್ವಯಿಸುವ ಅಭ್ಯರ್ಥಿಗಳು ಕನಿಷ್ಠ 55% ಅಂಕಗಳನ್ನು ಪಡೆಯಬೇಕು ಮತ್ತು ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳನ್ನು ಪಡೆಯಬೇಕು.

ಅರ್ಜಿ ಶುಲ್ಕ:

✓ ಒಂದು ಪತ್ರಿಕೆಗೆ; ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹1000/-, ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹500/-

✓ ಎರಡು ಪತ್ರಿಕೆಗಳಿಗೆ; ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹1200/-, ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹600/-

ಅರ್ಜಿ ಸಲ್ಲಿಸುವ ವಿಧಾನ

• CTET ಅಧಿಕೃತ ವೆಬ್‌ಸೈಟ್ https://ctet.nic.inಗೆ ಭೇಟಿ ನೀಡಿ.

• ನಂತರ *ಅಭ್ಯರ್ಥಿ ಚಟುವಟಿಕೆಗಳು* ವಿಭಾಗದ ಕೆಳಗೆ ನೀಡಲಾಗಿರುವ “CTET SEP 2026ಕ್ಕೆ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ

• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿಗಳು ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.

• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitectet.nic.in
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಸಿಟಿಇಟಿ ಸೆಪ್ಟೆಂಬರ್ 2026ರ ನೋಂದಣಿ ಆರಂಭ”

Leave a Comment