ದಾವಣಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಒಟ್ಟು 16 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ದಾವಣಗೆರೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ದಾವಣಗೆರೆಯ ಜಿಲ್ಲಾ ಪಂಚಾಯತ್ ಆಡಳಿತ ಕಚೇರಿಗೆ ಸಲ್ಲಿಸಬೇಕು. ಈ ನೇಮಕಾತಿ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.