ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ

Published on:

ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ, 3ಬಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ. ಮರಾಠ, ತಿಗಳ, ಗಾಣಿಗ, ಕುಂಬಾರ, ಹಡಪದ ಕೊಡವ ಮತ್ತು ಈಡಿಗ ಇದರ ಉಪ ಸಮುದಾಯಗಳು ಹೊರತುಪಡಿಸಿ) ಅಭ್ಯರ್ಥಿಗಳಾಗಿರಬೇಕು. ವಯೋಮಿಯು 18 ರಿಂದ 55 ವರ್ಷಗಳು. ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು..

  • ಅರ್ಜಿದಾರರು ಆಧಾರ್ ಕಾರ್ಡ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
  • ಬ್ಯಾಂಕ್ ಪಾಸ್ ಬುಕ್‌
  • ಹಾಗೂ ಅಗತ್ಯ ದಾಖಲೆಗಳು…

ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಎಲ್ಲಾ ದಾಖಲೆಗಳಲ್ಲಿ ಹೊಂದಾಣಿಕೆಯಾಗಿರಬೇಕು.

ಈಗಾಗಲೇ ಈ ಹಿಂದೆ ನಿಗಮದಿಂದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಅಥವಾ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2024-25 ಮತ್ತು 2025-26ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಅಧಿಕೃತ ಜಾಲತಾಣhttps://dbcdc.karnataka.gov.in/kn
ಮತ್ತಷ್ಟು ಸುದ್ದಿಗಾಗಿಕರ್ನಾಟಕಹೆಲ್ಪ್‌.ಇನ್
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

9 thoughts on “ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ”

Leave a Comment