ಡಿಪ್ಲೊಮಾ ಅಭ್ಯರ್ಥಿಗಳಿಗೆ ಎರಡನೇ ವರ್ಷದ/ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಜು.29ರಂದು ಪ್ರಕಟಿಸಲಾಗಿದ್ದು, ಸದರಿ ಸುತ್ತಿನ ಹಂಚಿಕೆ ನಂತರದ ಪ್ರಕ್ರಿಯೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಬುಧವಾರ ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರದ ಪ್ರಕ್ರಿಯೆಗಳ ವೇಳಾಪಟ್ಟಿಯನ್ನು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಬಿಡುಗಡೆ ಮಾಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅಭ್ಯರ್ಥಿಗಳು ಸೀಟು ಹಂಚಿಕೆಯಾದ ಕಾಲೇಜಿಗೆ ಕಡ್ಡಾಯವಾಗಿ ವರದಿ ಮಾಡಿಕೊಳ್ಳಬೇಕು
ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿಸಿ (ಪಾವತಿಸದಿದ್ದಲ್ಲಿ). Confirmation Slip ಅನ್ನು ಡೌನ್ ಲೋಡ್ ಮಾಡಿಕೊಂಡು ಸೀಟು ಹಂಚಿಕೆಯಾದ ಕಾಲೇಜಿಗೆ ಎಲ್ಲಾ ಮೂಲ ದಾಖಲೆಗಳು ಮತ್ತು ಇತರೆ ಅಗತ್ಯ ಧೃಡೀಕರಣಗಳೊಂದಿಗೆ ವರದಿ ಮಾಡಿಕೊಳ್ಳಲು ಪ್ರಾಧಿಕಾರವು ಸೂಚಿಸಿದೆ.
ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಸೀಟು ಹಂಚಿಕೆ ಮಾಡಿರುವ ಕಾರಣದಿಂದ ಅಭ್ಯರ್ಥಿಗಳು ಹಂಚಿಕೆಯಾದ ಸೀಟನ್ನು ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ ಹಾಗೂ ಈಗಾಗಲೇ ತಿಳಿಸಿರುವಂತೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಯಾವುದೇ ಚಾಯ್ಸ್ ಇರುವುದಿಲ್ಲ, ಕಡ್ಡಾಯವಾಗಿ ನಿಗದಿತ ದಿನಾಂಕದೊಳಗೆ ಪ್ರವೇಶಾತಿ ಪಡೆಯಬೇಕು.
ಸೀಟು ಹಂಚಿಕೆಯ ನಂತರದ ಪ್ರಕ್ರಿಯೆಗಳ ಪ್ರಮುಖ ದಿನಾಂಕಗಳು
• ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಜುಲೈ 30 ರಿಂದ 31ರವರೆಗೆ ಚಲನ್ ಡೌನ್ಲೋಡ್ ಮಾಡಿಕೊಳ್ಳಬೇಕು.
• ನಂತರ ಜುಲೈ 30 ರಿಂದ ಆಗಸ್ಟ್ 1ರ ಒಳಗೆ ಶುಲ್ಕ ಪಾವತಿ ಮಾಡಬೇಕು – (ಹಿಂದಿನ ಸುತ್ತಿನಲ್ಲಿ ಶುಲ್ಕವನ್ನು ಪಾವತಿಸಿದ್ದರೆ ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಹೊಂದಾಣಿಕೆ ಮಾಡಲಾಗುವುದು)
• ಇದಾದ ಬಳಿಕ ಜುಲೈ 30 ರಿಂದ ಆಗಸ್ಟ್ 2ರ ಒಳಗೆ ಶುಲ್ಕ ಪಾವತಿಯ ನಂತರ Confirmation Slip ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಕೊನೆಯ ದಿನಾಂಕವಾಗಿದೆ.
How to Check DCET 2nd Round Seat Allotment 2025
DCET-2025 ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ನೋಡುವ ವಿಧಾನ*
ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ *29-07 DCET-2025 ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಲಿಂಕ್ 29/07/2025* ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಸಿಇಟಿ ಸಂಖ್ಯೆ ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಿ.
Important Direct Links:
DCET 2025 Revised 2nd Round Seat Allotment Schedule PDF (Dated on 30/7/2025)
Rahul budag
Rahul budag