WhatsApp Channel Join Now
Telegram Group Join Now

DCET Document Verification 2024: ಮತ್ತೊಮ್ಮೆ ದಾಖಲೆ ಪರಿಶೀಲನೆಯ ದಿನಾಂಕ ವಿಸ್ತರಿಸಲಾಗಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2024-25ನೇ ಸಾಲಿನ ಡಿಪ್ಲೋಮೋ ಪ್ರವೇಶಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳ Ranking ಅನುಸಾರ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತದೆ.

ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯ ಮೂಲಕ ತಿಳಿಸಲಾಗಿದೆ.

CET- 2024 ಡಾಕ್ಯುಮೆಂಟ್ ಪರಿಶೀಲನೆಯನ್ನು 08-07-2024 ವರೆಗೆ ವಿಸ್ತರಿಸಲಾಗಿದೆ (Notice Given Below)

Dcet Document Verification 2024
Dcet Document Verification 2024

DCET Document Verification 2024

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಇಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.

ದಾಖಲೆಗಳ ಪರಿಶೀಲಿನೆಯು ದಿನಾಂಕ ಜುಲೈ 2 ರಿಂದ ಜುಲೈ 8ರ ವರೆಗೆ ಪ್ರತಿನಿತ್ಯ ಬೆಳಗ್ಗೆ 9.45 ರಿಂದ ಸಂಜೆ 4:30ರವರಿಗೆ ನಡೆಯುತ್ತದೆ. ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ Ranking ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಬಿಡುಗಡೆ ಮಾಡಿದ್ದು Ranking ಪಟ್ಟಿಯಲ್ಲಿ ಸೂಚಿಸಿರುವಂತೆ ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ಹಾಜರಾಗಬೇಕು.

Dcet Document Verification 2024 Date
Dcet Document Verification 2024 Date

DCET 2024 ರ ಸೀಟು ಹಂಚಿಕೆಗೆ ಅರ್ಹರಾಗಲು ಸಲ್ಲಿಸಬೇಕಾದ ಮೂಲ ದಾಖಲೆಗಳು

  • DCET 2024 ಕ್ಕೆ ಭರ್ತಿ ಮಾಡಿ ಸಲ್ಲಿಸಿರುವ ಅರ್ಜಿಯ ಪ್ರತಿ
  • ಡಿಪ್ಲೋಮೋ ಸಾಮಾನ್ಯ ಪರೀಕ್ಷೆಯ ಪ್ರವೇಶ ಪತ್ರ
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
    ಡಿಪ್ಲೋಮೋ ಅಂಕಪಟ್ಟಿಗಳು/ ಎಲ್ಲಾ ಸೆಮಿಸ್ಟರ್ ಅಂಕಪಟ್ಟಿಗಳು
  • 7 ವರ್ಷದ ವ್ಯಾಸಂಗ ಪ್ರಮಾಣ ಪತ್ರ

ಮೀಸಲಾತಿಯನ್ನು ಕೋರಿರುವ ಅಭ್ಯರ್ಥಿಗಳು ಸಲ್ಲಿಸಬೇಕಿರುವ ದಾಖಲೆಗಳು

  • ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ
  • ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹೈದರಾಬಾದ್ ಕರ್ನಾಟಕ ಪ್ರದೇಶ ಮೀಸಲಾತಿ ಪತ್ರ

Important Direct Links:

DCET Document Verification 2024 Last Date Extended Notice PDFDownload
DCET Document Verification 2024 Notice PDFDownload
DCET- 2024 Document Verification Center Address List PDFDownload
DCET 2024 ResultClick Here
More UpdatesKarnataka Help.in

Leave a Comment