DCET 2025 Kannada Exam Date: ಡಿಸಿಇಟಿ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಮೇ 31 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಮುಂದೂಡಲಾಗಿದ್ದ ಕನ್ನಡ ಭಾಷಾ ಪರೀಕ್ಷೆ(ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ)ಯ ವೇಳಾಪಟ್ಟಿಯನ್ನು ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.inನಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.