ಡಿಸಿಇಟಿ-2025ರ ಪ್ರವೇಶಾತಿ ಸಂಬಂಧ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂ.24 ರಂದು ಬಿಡುಗಡೆ ಮಾಡಿದೆ.
ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಈಗಾಗಲೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಇದೀಗ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ಡಿಸಿಇಟಿ – 2025ರ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.

Add as a Preferred Source on Google

