DCET Seat allotment Result 2025: 1ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ

Published on:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ – 2025 ಪ್ರವೇಶಾತಿ ಸಂಬಂಧ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸು ಪ್ರವೇಶಾತಿ ಸಲುವಾಗಿ ಮೇ 31 ರಂದು DCET-ಪ್ರವೇಶ ಪರೀಕ್ಷೆಯನ್ನು ನಡೆಸಿ ಜೂ.24ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಇದೀಗ ಪ್ರಾಧಿಕಾರವು ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಡಿಸಿಇಟಿ – 2025 ಪ್ರವೇಶಾತಿ

ಮೊದಲನೇ ಸುತ್ತಿನ ಸೀಟು ಮ್ಯಾಟ್ರಿಕ್ಸ್ ಪ್ರಕಟಿಸಿ, ಅಭ್ಯರ್ಥಿಗಳು ಎಲ್ಲಾ ಕೋರ್ಸುಗಳಿಗೂ ತಮ್ಮ ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಲು ಅವಕಾಶ ಕಲ್ಪಿಸಿ. ಜುಲೈ 12ರಂದು ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿತ್ತು. ಇದೀಗ ಪ್ರಾಧಿಕಾರವು ಸದರಿ ಪ್ರವೇಶಾತಿ ಸಂಬಂಧ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

How to Check DCET 1st Round Seat allotment Result 2025

DCET-2025 ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ನೋಡುವ ವಿಧಾನ

  • ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
  • ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ DCET-2025 ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಲಿಂಕ್17/07/2025
    ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮ್ಮ ಸಿಇಟಿ ಸಂಖ್ಯೆ ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಿ.

Important Direct Links:

DCET 1st Round Final Seat allotment Result 2025 Check Link (Dated On 17/7/2025)Check Now
DCET 1st Round Provisional Seat allotment Result 2025 Check LinkCheck Now
DCET 1st Round Provisional Seat allotment Result Cut-Off 2025(HK) PDFDownload
DCET 1st Round Provisional Seat allotment Result Cut-Off 2025(General) PDFDownload
Official Websitekea.kar.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment