ಪೋಷಣ್ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
ಸಲಹೆಗಾರರು (1), ಪ್ರಾಜೆಕ್ಟ್ ಅಸೋಸಿಯೇಟ್(1), ಸೆಕ್ರೆಟೇರಿಯಲ್ ಅಸಿಸ್ಟೆಂಟ್(1) ಹಾಗೂ ಆಫೀಸ್ ಮೆಸೆಂಜರ್(1) ಸೇರಿದಂತೆ ಒಟ್ಟು 04 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.23ರೊಳಗೆ ಇಲಾಖೆಗೆ ನಿಗದಿತ ದಾಖಲೆಗಳನ್ನು ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
✓ ಸಲಹೆಗಾರರು ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 55% ಅಂಕಗಳೊಂದಿಗೆ ಸಾಮಾಜಿಕ ವಿಜ್ಞಾನ/ಆರೋಗ್ಯ ಸಂವಹನ/ಸಮೂಹ ಸಂವಹನ/ಗ್ರಾಮೀಣಾಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಇದರಲ್ಲಿ (ಪೌಷ್ಟಿಕಾಂಶ/ಸಾರ್ವಜನಿಕ ಆರೋಗ್ಯದಲ್ಲಿ ತರಬೇತಿ/ಸಾಮರ್ಥ್ಯ ವೃದ್ಧಿ ನಿರ್ವಹಣೆಯ) ಕೋರ್ಸ್ಗಳು ಸೇರಿವೆ.
✓ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಐಟಿ/ಕಂಪ್ಯೂಟರ್ ಸೈನ್ಸ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
✓ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
✓ ಆಫೀಸ್ ಮೆಸೆಂಜರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳ ಗಮನಕ್ಕೆ– ಮೇಲಿನ ಎಲ್ಲಾ ಹುದ್ದೆಗಳಿಗೂ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನದೊಂದಿಗೆ ಸ್ಥಳೀಯ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯವನ್ನು ಹೊಂದಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 60 ವರ್ಷಗಳು
ಆಯ್ಕೆ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನದಂಡಗಳ ಪ್ರಕಾರ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 8,000ರೂ. ಗಳಿಂದ 60,000ರೂ. ವರೆಗೆ ಮಾಹೆಯಾನ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ (Resume) ಪ್ರತಿ ಹಾಗೂ ಅಗತ್ಯ ದಾಖಲಾತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಡಿಸೆಂಬರ್ 23ರೊಳಗೆ ತಲುಪುವಂತೆ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿಳಾಸ: ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿಡಬ್ಲೂಡಿ ಕಟ್ಟಡ, ಆನಂದ ರಾವ್ ವೃತ್ತ, ಬೆಂಗಳೂರು-560009
ಹೆಚ್ಚಿನ ವಿವರಗಳಿಗಾಗಿ: ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ https://dwcd.karnataka.gov.in/ ಕ್ಕೆ ಭೇಟಿ ನೀಡಿ.