ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳು: ಅರ್ಜಿ ಆಹ್ವಾನ

Published on:

ಬೆಂಗಳೂರು: ಇಲ್ಲಿನ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಆಪರೇಟರ್, ಲೆದರ್ ವರ್ಕರ್/ಶೂ ಮೇಕರ್, ಸ್ಪೀಚ್ ಥೆರಪಿಸ್ಟ್ ಮತ್ತು ಆಡಿಯಾಲಜಿಸ್ಟ್, ಮೊಬಿಲಿಟಿ ಇನ್ಸ್ಟ್ರಕ್ಟರ್, ಇಯರ್ ಮೋಲ್ಡ್ ಟೆಕ್ನಿಷಿಯನ್, ಕೀಲು ಮತ್ತು ಮೂಳೆ ತಜ್ಞ, ನೇತ್ರ ತಜ್ಞ, ಇಎನ್ಟಿ ತಜ್ಞ, ಮನೋವೈದ್ಯ, ಕೃತಕಾಂಗ ಜೋಡಣೆ ಅಭಿಯಂತರ ಹಾಗೂ ಕಚೇರಿ ಸೇವಕ ಸೇರಿದಂತೆ ಒಟ್ಟು 11 ಹುದ್ದೆಗೆ ಅಭ್ಯರ್ಥಿಗಳನ್ನು ಗೌರವಧನದ ಆಧಾರದ ಮೇಲೆ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.

ತಮ್ಮ ಸ್ವವಿವರ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ‘ಅಧ್ಯಕ್ಷರು/ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಕೆ.ಎಲ್.ಇ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆವರಣ, ಗೊರಗುಂಟೆಪಾಳ್ಯ, ಬೆಂಗಳೂರು-560022’ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ನ.20 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8431308600, 9164496483ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment