DHFW Koppal Vacancy 2025: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು PM ABHIM ಕಾರ್ಯಕ್ರಮದಡಿಯಲ್ಲಿ 53 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪಿ.ಎಂ-ಅಭಿಮ್ ಯೋಜನೆಯಡಿಯಲ್ಲಿ ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು ಹಾಗೂ ಕಿರಿಯ ಆರೋಗ್ಯ ಸಹಾಯಕರ (ಆರೋಗ್ಯ ನಿರೀಕ್ಷಣಾಧಿಕರಿಗಳು) ಹುದ್ದೆಗಳಿಗೆ ಎನ್.ಹೆಚ್.ಎಂ ನಿಯಮಾವಳಿ ಹಾಗೂ ಮೆರಿಟ್ ಮತ್ತು ರೋಸ್ಟರ್ ಹಾಗೂ 371ಜೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – District Health and Family Welfare Society Post Name – Various posts Total Vacancy – 19 Application Process – Online/offline Job Location – Koppal
ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು ಇ-ಆಸ್ಪತ್ರೆ ಕಾರ್ಯಕ್ರಮ – 01
ಶುಶ್ರೂಷಣಾಧಿಕಾರಿಗಳು – 08
ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – 07
ಕಿರಿಯ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು) – 07
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
ಎಸ್ಎಸ್ಎಲ್ಸಿ(SSLC), ಪಿಯುಸಿ ( ವಿಜ್ಞಾನ) , ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನೆಟ್ ಶಿಪ್ ಪೂರ್ಣಗೊಳಿಸಿರಬೇಕು.
ಕರ್ನಾಟಕ ವೈದ್ಯಕೀಯ ಕೌನ್ಸಿಲ್ ನಲ್ಲಿ ನೋಂದಣಿಯನ್ನು ಹೊಂದಿರಬೇಕು.
ವಯೋಮಿತಿ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಯೋಮಿತಿ ಹೊಂದಿರಬೇಕು.
ಸರ್ಕಾರಿ ನಿಯಮಗಳ ಅನ್ವಯ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ. ಲೇಖನದ ಕೊನೆಯಲ್ಲಿ “Important Direct Links” ಶೀರ್ಷಿಕೆಯಡಿ ನೀಡಲಾಗಿದೆ.
ಆಯ್ಕೆ ವಿಧಾನ
ನೇರ ಸಂದರ್ಶನ
ಮೆರಿಟ್ ಪಟ್ಟಿ
ದಾಖಲಾತಿ ಪರಿಶೀಲನೆ
ಅಭ್ಯರ್ಥಿಯ ದಾಖಲಾತಿ ಪರಿಶೀಲನೆಯ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕಾದ ಮೂಲ ಪ್ರಮಾಣ ಪತ್ರಗಳು:
ವಿವಿಧ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ/ಎಲ್ಲಾ ಸೆಮಿಸ್ಟರ್‌ಗಳ/ವರ್ಷಗಳ ಪ್ರಮಾಣ ಪತ್ರಗಳು ಅಥವಾ ಅಂಕಪಟ್ಟಿಗಳು. ( ಇಂಟರ್ನ್ ಶಿಪ್ ಅಂಕಗಳನ್ನು ಪರಿಗಣಿಸುವುದಿಲ್ಲ.)
ಸಂಬಂಧಿಸಿದ ಪ್ರಾಧಿಕಾರದಲ್ಲಿ ನೊಂದಣಿ ಮಾಡಿಸಿದ ಪ್ರಮಾಣ ಪತ್ರಗಳನ್ನು ಹಾಜರುಪಡಿಸಬೇಕು.
ಜನ್ಮ ದಿನಾಂಕವನ್ನು ಪರಿಗಣಿಸಲು ಎಸ್.ಎಸ್.ಎಲ್.ಸಿ ಅಂಕಪಟ್ಟಿಯನ್ನು ಅಪ್ ಲೋಡ್ ಮಾಡತಕ್ಕದ್ದು.
ವಿವಿಧ ಮೀಸಲಾತಿಗಳನ್ನು ಕೋರಿದ್ದಲ್ಲಿ, ಮೀಸಲಾತಿ ಪ್ರಮಾಣ ಪತ್ರಗಳು.
ಅನುಭವ/ನಿರಾಕ್ಷೇಪಣಾ ಪ್ರಮಾಣ ಪತ್ರಗಳು.
ಅರ್ಜಿ ಸಲ್ಲಿಸುವ ವಿಧಾನ
ಎನ್.ಹೆಚ್.ಎಂ ಕಾರ್ಯಕ್ರಮದಡಿ ತಜ್ಞವೈದ್ಯರು ಹಾಗೂ ಎಂ.ಬಿ.ಬಿ.ಎಸ್ ವೈದ್ಯರ ಹುದ್ದೆಗಳಿಗೆ ನೇರ ಸಂದರ್ಶಸನವಿರುವುದರಿಂದ ಕಛೇರಿಯಲ್ಲಿ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೊಪ್ಪಳ.- 583231 ದೂರವಾಣಿ – 08539-221660
ಪಿಎಂ ಅಭಿಮ್ ಯೋಜನೆಯಡಿಯಲ್ಲಿ ಖಾಲಿ ಇರುವ ಶುಶೂಷಣಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು ಹಾಗೂ ಕಿರಿಯ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು) ಹುದ್ದೆಗಳಿಗೆ ಕೊಪ್ಪಳ ಜಿಲ್ಲೆ ಅಧಿಕೃತ ವೆಬ್ಸೈಟ್ https://koppal.nic.in/ ಗೆ ಭೇಟಿ ನೀಡಿ.
ಸುದ್ದಿ ವಿಭಾಗದಲ್ಲಿ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು PM ABHIM ಕಾರ್ಯಕ್ರಮದಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ (ಗುತ್ತಿಗೆ ಆಧಾರದ ಮೇಲೆ) ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.