ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBH1) ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿಸಲಾಗಿರುವ ದಿನಾಂಕದಂದು ತಮ್ಮ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಕು.ಕ.ಇಲಾಖೆ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ನೇರ ಸಂದರ್ಶನ ನಡೆಯುವ ಸ್ಥಳ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹಾಗೂ ವೃತ್ತಿ ಅನುಭವ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
MBBS, ನರ್ಸಿಂಗ್ ಅಥವಾ ತತ್ಸಮಾನ ಪದವಿ, ಎಂಫಿಲ್, ಸಂಬಂಧಿಸಿದ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗರಿಷ್ಠ ಮಿತಿ – 45 ರಿಂದ 60 ವರ್ಷಗಳು
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ನೇರ ಸಂದರ್ಶನ ನಡೆಯುವ ಸ್ಥಳ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಲ್ಲಾ ಅಗತ್ಯ ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಮತ್ತು ಒಂದು ಸೆಟ್ ದೃಡೀಕೃತ ನಕಲು ಪ್ರತಿಗಳೊಂದಿಗೆ ಇದೇ ಜುಲೈ 30ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಸಲಾಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣ, ಚಿತ್ರದುರ್ಗ
ವಿಶೇಷ ಸೂಚನೆ: ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಕಾರ್ಯಕಮದ ಅಡಿಯಲ್ಲಿ ಈ ಹಿಂದೆ/ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿ ಚಿತ್ರದುರ್ಗ ಇಲ್ಲಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ. ಅಥವಾ ಮೊಬೈಲ್ ಸಂಖ್ಯೆ 8971552887, 9611783297 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
Hi