ಕಲಬುರಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್.ವಿ.ಬಿ.ಡಿ.ಸಿ.ಪಿ ಕಾರ್ಯಕ್ರಮದಡಿ ತಾಲೂಕು ವಿ.ಬಿ.ಡಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.
ಕಲಬುರಗಿ ಮತ್ತು ಚಿತ್ತಾಪುರ ತಾಲೂಕುಗಳಿಗೆ ಇಬ್ಬರು ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಜ.18 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯ ಅಧಿಕೃತ ಜಾಲತಾಣ https://kalaburagi.nic.in/en/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಡಿಎಸ್ಓ / ಡಿವಿಬಿಡಿಸಿಪಿ ಅಧಿಕಾರಿಗಳು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಜೀವಶಾಸ್ತ್ರ ವಿಭಾಗದಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಅಪೇಕ್ಷಿತ ಅರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದ ಪ್ರದೇಶಗಳಲ್ಲಿ, 10ನೇ ತರಗತಿ/ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳೊಂದಿಗೆ ಉತ್ತೀರ್ಣರಾದ ಪದವಿ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
• ಆರೋಗ್ಯ ಸಂಬಂಧಿತ ಕಾರ್ಯಕ್ರಮದಲ್ಲಿ ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಹಾಗೂ ಅರ್ಜಿದಾರರು ಮಾನ್ಯವಾದ ದ್ವಿಚಕ್ರ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಸಂಬಳ:
ಮಾಹೆಯಾನ ₹22,000 ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಆಯ್ಕೆ ವಿಧಾನ:
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘಗಳ ನಿಯಮಗಳ ಅನುಸಾರ ಅಭ್ಯರ್ಥಿಗಳನ್ನು ಸದರಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯ ಅಧಿಕೃತ ಜಾಲತಾಣ https://kalaburagi.nic.in/en/ ಕ್ಕೆ ಭೇಟಿ ನೀಡಿ.
• ನಂತರ ಇತ್ತೀಚಿನ ಸುದ್ದಿಗಳು ವಿಭಾಗದಲ್ಲಿ ನೀಡಲಾಗಿರುವ “NVBDCP VBD ಮೇಲ್ವಿಚಾರಕರ ಹುದ್ದೆಗಳ ಅಧಿಸೂಚನೆ 2025-26 ಹೊಸದು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಉದ್ಯೋಗ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ಸಲ್ಲಿಕೆಯ https://sevasindhuservices.karnataka.gov.in/directApply.do?serviceId=2037 ಲಿಂಕ್ ಮೇಲೆ ಟ್ಯಾಪ್ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Very good information about notifications