ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದೆ.
ವಿವಿಧ ವೃಂದಗಳಲ್ಲಿ ಖಾಲಿ ಇರುವ (ಶುಶೂಷಾಧಿಕಾರಿಗಳು-12, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು-01 ಹಾಗೂ ಫಾರ್ಮಸಿಸ್ಟ್-01) ಸೇರಿದಂತೆ ಒಟ್ಟು 14 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಕೊಪ್ಪಳ ಜಿಲ್ಲೆಯ ಅಧಿಕೃತ ವೆಬ್ಸೈಟ್ https://koppal.nic.in/ ಗೆ ಭೇಟಿ ನೀಡಿ. ನವೆಂಬರ್ 15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
✓ ಶುಶ್ರೂಷಕರು-12 ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಜಿ.ಎನ್.ಎಂ/ಬಿಎಸ್ಸಿ ನರ್ಸಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು ಜೊತೆಗೆ ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
✓ ಹಿರಿಯ ಪ್ರಯೋಗ ಶಾಲಾ ತಂತ್ರಜ್ಞರು-01 ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 03 ವರ್ಷದ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
• ದ್ವಿತೀಯಾ ಪಿ.ಯು.ಸಿಯಲ್ಲಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣ ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ 2 ವರ್ಷಗಳ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಪಡೆದಿರಬೇಕು ಹಾಗೂ ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯ ನೋಂದಣಿ ಹೊಂದಿರಬೇಕು.
✓ ಫಾರ್ಮಸಿಸ್ಟ್ (ಔಷಧ ವಿತರಕರು) -01 ಹುದ್ದೆಗೆ; ಅಭ್ಯರ್ಥಿಗಳು ಔಷಧ ವಿತರಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಗತ್ಯ (ಡಿ,ಫಾರ್ಮ/ಬಿ,ಫಾರ್ಮ) ವಿದ್ಯಾರ್ಹತೆ ಹೊಂದಿರಬೇಕು ಮತ್ತು ರಾಜ್ಯದ ಫಾರ್ಮಸಿ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು ಹಾಗೂ ಸ್ಥಳೀಯ ರಾಜ್ಯ ಭಾಷೆ ತಿಳಿದಿರುವ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ವಯೋಮಿತಿ:
ಕನಿಷ್ಠ ವಯೋಮಿತಿ – 18 ವರ್ಷಗಳು ಗರಿಷ್ಠ ವಯೋಮಿತಿ – 45 ವರ್ಷಗಳು
ಆಯ್ಕೆ ವಿಧಾನ:
ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಸಿಸ್ಟಮ್ ಅನುಸರಿಸಿ ಸಂದರ್ಶನ ಹಾಗೂ ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಾಹೆಯಾನ 16,067ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
• ಕೊಪ್ಪಳ ಜಿಲ್ಲೆಯ ಅಧಿಕೃತ ವೆಬ್ಸೈಟ್ https://koppal.nic.in/ಗೆ ಭೇಟಿ ನೀಡಿ.
• ನಂತರ ಸುದ್ದಿ ವಿಭಾಗದಲ್ಲಿ ನೀಡಲಾಗಿರುವ “ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಷ್ಟಗಿಯಲ್ಲಿ ಖಾಲಿ ಇರುವ ಶುಶ್ರೂಷಕರು, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ಫಾರ್ಮಸಿಸ್ಟ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಿದೆ. ಹೊಸದು” ಶೀರ್ಷಿಕೆಯ ಮೇಲೆ ಟ್ಯಾಪ್ ಮಾಡಿ.
Dhfws Koppal Online Form 2025
• ಬಳಿಕ “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಅನ್ನು ಆಯ್ಕೆ ಮಾಡಿ.
• ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ, ಅರ್ಜಿಯಲ್ಲಿ ಕೇಳಲಾಗುವ ವೈಯಕ್ತಿಕ ಮಾಹಿತಿಗಳನ್ನು ನಮೂದಿಸಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾದ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.