ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಗಳ ರಕ್ತನಿಧಿ ಕೇಂದ್ರಗಳಲ್ಲಿ ಖಾಲಿ ಇರುವ ಪ್ರಯೋಗ ಶಾಲಾ ತಜ್ಞ ಹುದ್ದೆ(Laboratory Technician)ಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಕರೆಯಲಾಗಿದೆ ಎಂದು ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ಹಾಗೂ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಗಳಲ್ಲಿ ಖಾಲಿ ಇರುವ 2 ಪ್ರಯೋಗ ಶಾಲಾ ತಜ್ಞ ಹುದ್ದೆಗೆ ಅಭ್ಯರ್ಥಿಗಳನ್ನು ಒಂದು ವರ್ಷ ಅವಧಿಗೆ (ಸೇವಾ ಕಾರ್ಯಕ್ಷಮತೆಯ ಆಧಾರದ ಮೇಲೆ ಮುಂದುವರಿಸಬಹುದು) ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – District Health and Family Welfare Society
Post Name – Laboratory Technician
Total Vacancy – 02
Application Process – Walk-in-Interview
Job Location – Mysore
ನೇರ ಸಂದರ್ಶನ ನಡೆಯುವ ಪ್ರಮುಖ ದಿನಾಂಕ ಹಾಗೂ ಸಮಯ
ದಿನಾಂಕ 19-05-2025 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಸಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಪ್ರಾಯೋಗಿಕ ಹುದ್ದೆಯಲ್ಲಿ 2 ಹುದ್ದೆ ಖಾಲಿ ಇದ್ದು, ಅಂಗೀಕೃತ ವಿಶ್ವವಿದ್ಯಾನಿಲಯ ಮಾನ್ಯತೆ ಪಡೆದ ಸಂಸ್ಥೆಯಿoದ DMLT ಅಥವಾ ಸಮಾನವಾದ ವಿದ್ಯಾರ್ಹತೆ (ಸಮನಾದ ವಿದ್ಯಾರ್ಹತೆ ಎಂದರೆ DMLT, BSc MLT ಎಂದು ಅರ್ಥೈಸಿಕೊಳ್ಳಬೇಕು) ಮತ್ತು ವಿಜ್ಞಾನ ವಿಷಯದಲ್ಲಿ ಪದವಿ ಪೂರ್ವ ವಿದ್ಯಾರ್ಹತೆ(ಪಿ.ಯು.ಸಿ ತೇರ್ಗಡೆ ಹೊಂದಿರಬೇಕು) ಹಾಗೂ 2 ವರ್ಷ ರಕ್ತ ಕೇಂದ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 55 ವರ್ಷ ಮೀರಿರಬಾರದು.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25.000 ಸಾವಿರ ಸಂಚಿತ ಮೊತ್ತ ನೀಡಲಾಗುತ್ತದೆ.
ಆಯ್ಕೆ ವಿಧಾನ:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಒಟ್ಟುಗೂಡಿಸಿ ಸರಾಸರಿ ಆಧಾರದ ಮೇಲೆ ಮತ್ತು ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಆಯ್ಕೆ ಪಟ್ಟಿ ತಯಾರಿಸಿ ಸಮಿತಿ ಸಭೆಯ ಒಪ್ಪಿಗೆ ಮೇರೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ವೈಯಕ್ತಿಕ ವಿವರ (ಬಯೋಡೆಟಾ) ಮತ್ತು ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರ ಹಾಗೂ ಇತರೆ ಸಂಭoದಿಸಿದ ದಾಖಲೆಗಳೊಂದಿಗೆ
ಮೇ 19 ರಂದು ಬೆಳಗ್ಗೆ 10 ಕಡ್ಡಾಯವಾಗಿ ವೈದ್ಯರ ಭವನ ಎನ್.ಪಿ.ಸಿ ಆಸ್ಪತ್ರೆ ಆವರಣ ನಜರ್‌ಬಾದ್ ಮೈಸೂರು ಇಲ್ಲಿ ನೋಂದಣಿ ಮಾಡಿಸಿಕೊಳ್ಳುಬೇಕು.
ಅಭ್ಯರ್ಥಿಗಳು ನೇರ ಸಂದರ್ಶನದ ದಿನದಂದೇ ನಿಗಧಿತ ಅರ್ಜಿ ನಮೂನೆಯಲ್ಲಿಯೇ ಭರ್ತಿ ಮಾಡಿ ಸಂಬoಧಪಟ್ಟ ದಾಖಲಾತಿಗಳನ್ನು ಸಲ್ಲಿಸಬೇಕು.
ವಿಶೇಷ ಸೂಚನೆ
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ ನಿಗದಿಪಡಿಸಿದ ವಿದ್ಯಾರ್ಹತೆ ಪ್ರಮಾಣ ಪತ್ರ ಅನುಭವ ಪ್ರಮಾಣ ಪತ್ರ ಹಾಗೂ ಇತರೆ ಸಂಬoಧಿಸಿದ ದಾಖಲೆಗಳನ್ನು ಹಾಜರುಪಡಿಸಬೇಕು.
ಗುತ್ತಿಗೆ ಅವಧಿ 31.03.2026 ರ ವರೆಗೂ (ಸೇವಾ ಕಾರ್ಯಕ್ಷಮತೆಯ ಆಧಾರದ ಮೇಲೆ ಮುಂದುವರಿಸಬಹುದು) ಇರುತ್ತದೆ.
Important Direct Links:
Official Website | mysore.nic.in |
More Updates | Karnataka Help.in |