ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜು ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 35 ಶುಶ್ರೂಷಾಧಿಕಾರಿ(ಸ್ಟಾಪ್ ನರ್ಸ್) ಹುದ್ದೆಗಳ ನೇಮಕಾತಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ.
2025-26ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ನೀಡಲಾಗಿರುವ ಒಟ್ಟು 35 ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನ ಭಾಗವಹಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ನೇಮಕಾತಿಯ ಪ್ರಮುಖ ದಿನಾಂಕಗಳು:
ನೇಮಕಾತಿ ಪ್ರಕಟಣೆಯ ದಿನಾಂಕ- ಜುಲೈ 24, 2025
ನೇಮಕಾತಿ ಪ್ರಕ್ರಿಯೆ ನಡೆಯುವ ದಿನಾಂಕ – ಜುಲೈ 29, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಜಿ.ಎನ್.ಎಂ / ಬಿ.ಎಸ್.ಸಿ. ನರ್ಸಿಂಗ್ ಪದವಿ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಆಯ್ಕೆ ವಿಧಾನ:
ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
• ಉಲ್ಲೇಖಿಸಲಗಿರುವುದಿಲ್ಲ
ನೇರ ಸಂದರ್ಶನ ನಡೆಯುವ ದಿನಾಂಕ ಹಾಗೂ ಸ್ಥಳ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲ ಶೈಕ್ಷಣಿಕ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಜು.29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 4.30ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ನಾಗಮ್ಮ ಆಸ್ಪತ್ರೆ ಆವರಣ ನಜರ್‌ಬಾದ್, ಮೈಸೂರು ಈ ವಿಳಾಸದಲ್ಲಿ ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.