ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
2024 25 ನೇ ಸಾಲಿನ ಮಂಜೂರಿಗಾಗಿ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು, ಆಶಾ ಮೇಲ್ವಿಚಾರಕರು, ಶುಶ್ರೂಷಕರು, ಹಿರಿಯ ಮಹಿಳಾ ಆರೋಗ್ಯ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಈ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನಿಮ್ಮ ಖಾತೆ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಯಚೂರು ಆರೋಗ್ಯ ಇಲಾಖೆಯ ಅಧಿಕೃತ ವೆಬ್ ಸೈಟ್ https://raichur.nic.in ನಲ್ಲಿ ಆಗಸ್ಟ್ 29ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ DHFWS Raichur Recruitment 2024 ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of DHFWS Raichur Vacancy 2024
Organization Name – District Health and Family Welfare Society Post Name – Various posts Total Vacancy – 65 Application Process: Online Job Location – Raichur
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 9, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 29, 2024
ಖಾಲಿ ಇರುವ ಹುದ್ದೆಗಳ ವಿವರ:
ಸ್ತ್ರೀ ರೋಗ ತಜ್ಞರು-03
ಮಕ್ಕಳ ತಜ್ಞರು-02
ಎಂ.ಬಿ.ಬಿ.ಎಸ್. ಎಸ್.ಎನ್.ಸಿ.ಯು. ವಿಭಾಗ-03
ಎಂ.ಬಿ.ಬಿ.ಎಸ್. ಹೆಚ್.ಡಿ.ಯು. 04
ಎಂ.ಬಿ.ಬಿ.ಎಸ್. ಎನ್.ಯು.ಹೆಚ್.ಎಂ -01
ಎಂ.ಬಿ.ಬಿ.ಎಸ್. ನಮ್ಮ ಕ್ಲಿನಿಕ್-04
ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು-01
ತಾಲೂಕಾ ಆಶಾ ಮೇಲ್ವಿಚಾರಕರು-01
ಶುಶೂಷಕರು-32
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ-03
ಆರೋಗ್ಯ ನಿರೀಕ್ಷಣಾಧಿಕಾರಿಗಳು-10
ತಾಲೂಕು ವಿ.ಬಿ.ಡಿ. ತಾಂತ್ರಿಕ ಮೇಲ್ವಿಚಾರಕರು-01
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBBS/DHO/MD/OBB ಪದವಿ ಪಡೆದುಕೊಂಡಿರಬೇಕು.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ನರ್ಸಿಂಗ್ ಪೂರ್ಣಗೊಳಿಸಿರಬೇಕು.
(ನಿರ್ದಿಷ್ಟ ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಚೆಕ್ ಮಾಡಿ)
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18ರಿಂದ ಗರಿಷ್ಠ 70 ವರ್ಷಗಳು ಮೀರಿರಬಾರದು.
ವೇತನ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಗೆ ನಿಗದಿತ ಹುದ್ದೆಗಳ ಅನುಸಾರ ವೇತನ ಶ್ರೇಣಿಯನ್ನು ನೀಡಲಾಗುತ್ತದೆ. ₹15,397 ರಿಂದ ₹1,30,000ಮಾಸಿಕ ವೇತನ ನೀಡಲಾಗುತ್ತದೆ.