ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಮತ್ತು ಪಿ.ಎಂ ಅಭೀಮ್ ಯೋಜನೆಯಡಿ ಕಿರಿಯ ಮಹಿಳಾ ಸಹಾಯಕಿ(19 ಹುದ್ದೆ) ಹಾಗೂ ಆರೋಗ್ಯ ನಿರೀಕ್ಷಣಾಧಿಕಾಧಿಕಾರಿ(01 ಹುದ್ದೆ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 20 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾ.11ರೊಳಗೆ ರಾಯಚೂರು ಜಿಲ್ಲೆಯ ಅಧಿಕೃತ ಜಾಲತಾಣ https://raichur.nic.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
✓ ಕಿರಿಯ ಮಹಿಳಾ ಸಹಾಯಕಿ ಹುದ್ದೆಗೆ; ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಗಳ ಶಾಲೆಗಳಲ್ಲಿ ಕಿರಿಯ ಮಹಿಳಾ ಸಹಾಯಕಿಯರ ತರಬೇತಿಯನ್ನು ಪಡೆದಿರಬೇಕು ಮತ್ತು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿ ಆಗಿರಬೇಕು.
✓ ಆರೋಗ್ಯ ನಿರೀಕ್ಷಣಾಧಿಕಾಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಹೊಂದಿರಬೇಕು/ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ಹೊಂದಿರಬೇಕು/ ದ್ವಿತೀಯ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ಹೊಂದಿರಬೇಕು.
ವಯಸ್ಸಿನ ಮಿತಿ:
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಆಯ್ಕೆ ವಿಧಾನ:
ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ನಿಯಮದಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಕಿರಿಯ ಮಹಿಳಾ ಸಹಾಯಕಿಯರ ಹುದ್ದೆಗಳಿಗೆ – ₹14,044-15397 ಆರೋಗ್ಯ ನಿರೀಕ್ಷಣಾಧಿಕಾಧಿಕಾರಿಗಳ ಹುದ್ದೆಗಳಿಗೆ – ₹15,397
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ಅಧಿಕೃತ ಜಾಲತಾಣ https://raichur.nic.in/ಕ್ಕೆ ಭೇಟಿ ನೀಡಿ.
• ಬಳಿಕ *ನೇಮಕಾತಿಗಳು* ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ರಾಯಚೂರು ಜಿಲ್ಲೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ ಪಿ. ಎಂ ಅ ಭಿ ಮ್ ಕಾರ್ಯಕ್ರಮಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಜಿ ಅಹ್ವಾನ. New” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ *ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ* ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ಅರ್ಜಿ ನಮೂನೆ ತೆಗೆದುಕೊಳ್ಳುತ್ತದೆ, ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಅರ್ಜಿಯನ್ನು ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 9449843121, 9844193931 ಅನ್ನು ಸಂಪರ್ಕಿಸಬಹುದು.