ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉತ್ತರ ಕನ್ನಡ (DHFWS Uttara Kannada) ಸೆಪ್ಟೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಉತ್ತರ ಕನ್ನಡ ಜಿಲ್ಲೆಯ ತಾಲೂಕಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರು, ಮುಖ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಒಪ್ಪಂದದ ಷರತ್ತಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 25, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 09, 2025
ಲಭ್ಯವಿರುವ ಹುದ್ದೆಗಳು:
ತಜ್ಞ ವೈದ್ಯರು (Specialist Doctor) – 39
ಮುಖ್ಯ ವೈದ್ಯಾಧಿಕಾರಿ (Chief Medical Officer) – 29
ಸಾಮಾನ್ಯ ವೈದ್ಯಾಧಿಕಾರಿ (GC Medical Officer) – 02
ವಿದ್ಯಾರ್ಹತೆ:
DHFWS ಉತ್ತರ ಕನ್ನಡ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ
ಸಂದರ್ಶನ
ವೇತನ:
ತಜ್ಞ ವೈದ್ಯರು – ರೂ. 130000/-
ಮುಖ್ಯ ವೈದ್ಯಾಧಿಕಾರಿ – ರೂ. 60000/-
ಸಾಮಾನ್ಯ ವೈದ್ಯಾಧಿಕಾರಿ – ರೂ. 60000/-
ಅರ್ಜಿ ಸಲ್ಲಿಸುವುದು ಹೇಗೆ ?
DHFWS ಉತ್ತರ ಕನ್ನಡ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಯಾವುದೇ ಅನುಭವ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ, ಅಗತ್ಯ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಿ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕಚೇರಿ, ಕಾರವಾರ, ಉತ್ತರ ಕನ್ನಡ
ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿಗಳನ್ನು ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಕಾರವಾರ ಇವರಿಂದ ಕಚೇರಿ ವೇಳೆಯಲ್ಲಿ ಪಡೆಯಬಹುದು. ದೂರವಾಣಿ ಸಂಖ್ಯೆ – 08382 – 226339
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.