ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ(DHFWS Vijayanagara Vacancy 2024) ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಅಡಿಯಲ್ಲಿ ರೋಗ-ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಆಡಿಯೊಮೆಟ್ರಿಕ್ ಸಹಾಯಕರು, ಶ್ರವಣದೋಷವುಳ್ಳ ಮಕ್ಕಳ ಬೋಧಕರು, ಶುಶ್ರೂಷಕಿಯರು, ಡಿ.ಇ.ಐ.ಸಿ ಮ್ಯಾನೇಜರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪಿ.ಹೆಚ್.ಸಿ.ಓ, ಆರೋಗ್ಯ ನೀರಿಕ್ಷಣಾಧಿಕಾರಿ, ಮನೋರೋಗ ತಜ್ಞ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲಾ ಕೇಂದ್ರ ಆರೋಗ್ಯ ಕುಟುಂಬ ಇಲಾಖೆಯಲ್ಲಿ ಒಟ್ಟು 29 ಹುದ್ದೆಗಳು ಖಾಲಿಯಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿಜಯನಗರ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 26ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯ ಅಂಕಗಳು ಮತ್ತು ಕೋವಿಡ್-19 ಸಂದರ್ಭದಲ್ಲಿ ಸಲ್ಲಿಸಿದ ಸೇವಾ ಅವಧಿ ಒಟ್ಟುಗೂಡಿಸಿ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳ ಕುರಿತು ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of DHFWS Vijayanagara Notification 2024
Organization Name – District Health and Family Welfare Society Post Name – Various posts Total Vacancy – 29 Application Process: Offline Job Location – Vijayanagara
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 26, 2024
ಹುದ್ದೆಗಳ ವಿವರ:
ಸ್ತ್ರೀರೋಗ-ಪ್ರಸೂತಿ ತಜ್ಞರು: 3
ಮಕ್ಕಳ ತಜ್ಞರು: 4
ವೈದ್ಯಾಧಿಕಾರಿಗಳು: 26
ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು: 1
ಆಡಿಯೊಮೆಟ್ರಿಕ್ ಸಹಾಯಕರು: 1
ಶ್ರವಣದೋಷವುಳ್ಳ ಮಕ್ಕಳ ಬೋಧಕರು: 1
ಶುಶ್ರೂಷಕಿಯರು: 10
ಡಿ.ಇ.ಐ.ಸಿ ಮ್ಯಾನೇಜರ್: 1
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ: 2
ಪಿ.ಹೆಚ್.ಸಿ.ಓ: 1
ಆರೋಗ್ಯ ನೀರಿಕ್ಷಣಾಧಿಕಾರಿ: 1
ಮನೋರೋಗ ತಜ್ಞರು: 2
ವಯಸ್ಸಿನ ಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಆಗಿದ್ದು ಹುದ್ದೆಗಳ ಅನುಸಾರ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸ್ತ್ರೀರೋಗ-ಪ್ರಸೂತಿ ತಜ್ಞರು : ಗರಿಷ್ಠ 70 ವರ್ಷ
ವೈದ್ಯಾಧಿಕಾರಿಗಳು : ಗರಿಷ್ಠ 70 ವರ್ಷ
ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು : ಗರಿಷ್ಠ 45 ವರ್ಷ
ಆಡಿಯೊಮೆಟ್ರಿಕ್ ಸಹಾಯಕರು : ಗರಿಷ್ಠ 45 ವರ್ಷ
ಶ್ರವಣದೋಷವುಳ್ಳ ಮಕ್ಕಳ ಬೋಧಕರು : ಗರಿಷ್ಠ 45 ವರ್ಷ
ಶುಶ್ರೂಷಕಿಯರು : ಗರಿಷ್ಠ 45 ವರ್ಷ
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ : ಗರಿಷ್ಠ 65 ವರ್ಷ
ಪಿ.ಹೆಚ್.ಸಿ.ಓ : ಗರಿಷ್ಠ 40 ವರ್ಷ
ಆರೋಗ್ಯ ನೀರಿಕ್ಷಣಾಧಿಕಾರಿ : ಗರಿಷ್ಠ 40 ವರ್ಷ
ವೇತನ ವಿವರ:
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಪ್ರತಿ ಹುದ್ದೆಗಳಿಗೆ ವೇತನ ನಿಗದಿಪಡಿಸಲಾಗಿದ್ದು ವೇತನದ ವಿವರಗಳನ್ನು ಕೆಳಗೆ ನೀಡಲಾಗಿದೆ.
ಸ್ತ್ರೀರೋಗ-ಪ್ರಸೂತಿ ತಜ್ಞರು :₹ 1,30,000
ಮಕ್ಕಳ ತಜ್ಞರು: ₹1,30,000
ವೈದ್ಯಾಧಿಕಾರಿಗಳು : ₹ 46,895-50,000
ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು : 35,000
ಆಡಿಯೊಮೆಟ್ರಿಕ್ ಸಹಾಯಕರು : 15,000
ಶ್ರವಣದೋಷವುಳ್ಳ ಮಕ್ಕಳ ಬೋಧಕರು : 15,000
ಶುಶ್ರೂಷಕಿಯರು : 14,187
ಡಿ.ಇ.ಐ.ಸಿ ಮ್ಯಾನೇಜರ್ : 17,500
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ : 15,397
ಪಿ.ಹೆಚ್.ಸಿ.ಓ : 14,044
ಆರೋಗ್ಯ ನೀರಿಕ್ಷಣಾಧಿಕಾರಿ : 15,397
ಮನೋರೋಗ ತಜ್ಞರು : 1,10,00
ಆಯ್ಕೆ ವಿಧಾನ:
ಅತಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೆರಿಟ್ ಲಿಸ್ಟ್ ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
How to Apply for DHFWS Vijayanagara Recruitment 2024
ಅರ್ಜಿ ಸಲ್ಲಿಸಲು ಪ್ರಕ್ರಿಯೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಪಡೆದುಕೊಂಡು ಸೂಕ್ತ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ 60 ಹಾಸಿಗೆಯ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗ, ಮಸೀದಿ ಹತ್ತಿರ, ಹೊಸಪೇಟೆ.