ತಜ್ಞ ವೈದ್ಯರು, ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ನೇರ ಸಂದರ್ಶನದ ಮೂಲಕ ಆಯ್ಕೆ

Published on:

ಫಾಲೋ ಮಾಡಿ
DHFWS Yadgir Specialist doctors, medical officers Notification 2026
ತಜ್ಞ ವೈದ್ಯರು, ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರು, ವೈದ್ಯಾಧಿಕಾರಿಗಳನ್ನು ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ ಬಿರಾದಾರ ಅವರು ತಿಳಿಸಿದ್ದಾರೆ.

ಮಕ್ಕಳ ತಜ್ಞ 4 ಹುದ್ದೆ, ಅರವಳಿಕೆ ತಜ್ಞ 8 ಹುದ್ದೆ, ಪ್ರಸೂತಿ ತಜ್ಞ 8 ಹುದ್ದೆ, ಫೀಜಿಶಿಯನ್ ಜಿ.ಎಮ್ 2 ಹುದ್ದೆ, ಹಿರಿಯ ವೈದ್ಯಾಧಿಕಾರಿಗಳು ಎಮ್‌ಬಿಬಿಎಸ್ 1 ಹುದ್ದೆ, ಸಾಮಾನ್ಯ ಕರ್ತವ್ಯ ವೈದ್ಯರು 3 ಹುದ್ದೆ, ಕಿವಿ ಮೂಗು & ಗಂಟಲು ತಜ್ಞ 1 ಹುದ್ದೆ ಹಾಗೂ ಚರ್ಮ ರೋಗ ತಜ್ಞ 2 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುವುದು. ಆಕ್ತರು ಏ.16ರ ಒಳಗೆ ಅರ್ಜಿ ಸಲ್ಲಿಸಬೇಕು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment