ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಪ್ಯೂನ್‌ ಭರ್ತಿ; 13 ರಿಂದ ಅರ್ಜಿ

ಏ.13ರೊಳಗೆ ಅರ್ಜಿ ಸಲ್ಲಿಸಿ

Published on:

ಚಾಮರಾಜನಗರ: ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶವರ ಕಚೇರಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆಗೆ ಮಾ.13 ರಿಂದ ಏ.13ರ ಗಡುವು ನೀಡಿದೆ.

ಸ್ಟೆನೋಗ್ರಾಫರ್(ಶೀಘ್ರಲಿಪಿಗಾರ) 02 ಸ್ಥಾನ, ಟೈಪಿಸ್ಟ್ (ಬೆರಳಚ್ಚುಗಾರ) 06 ಸ್ಥಾನ, ಟೈಪಿಸ್ಟ್-ಕಾಪಿಇಸ್ಟ್(ಬೆರಳಚ್ಚು-ನಕಲುಗಾರ) 04 ಸ್ಥಾನ, ಪ್ಯೂನ್‌(ಸೇವಕ) 13 ಸ್ಥಾನ ಸೇರಿದಂತೆ ಒಟ್ಟು 25 ಸ್ಥಾನಗಳಿಗೆ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://chamarajanagara.dcourts.gov.in/online-recruitment/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮಾರ್ಚ್ 13, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 13, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 16, 2026

ಶೈಕ್ಷಣಿಕ ಅರ್ಹತೆ:

✓ ಸ್ಟೆನೋಗ್ರಾಫರ್ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ/ಡಿಪ್ಲೊಮಾ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

✓ ಟೈಪಿಸ್ಟ್ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ/ಡಿಪ್ಲೊಮಾ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

✓ ಟೈಪಿಸ್ಟ್-ಕಾಪಿಇಸ್ಟ್ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ/ಡಿಪ್ಲೊಮಾ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

✓ ಪ್ಯೂನ್‌ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷೆ ಓದಲು ಬರೆಯಲು ತಿಳಿದಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು. ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು.

ವಯೋಮಿತಿ ಸಡಿಲಿಕೆ; ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 05 ವರ್ಷಗಳು, ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ – 05 ವರ್ಷಗಳು.

ಆಯ್ಕೆ ವಿಧಾನ:

ಅರ್ಹತಾ ಪರೀಕ್ಷೆ
ಕಂಪ್ಯೂಟರ್ ಸಾಮರ್ಥ್ಯ ಪರೀಕ್ಷೆ
ಸಂದರ್ಶನ
ಅಂತಿಮ ಆಯ್ಕೆ

ಸಂಬಳ:

ಸ್ಟೆನೋಗ್ರಾಫರ್ ಹುದ್ದೆಗಳಿಗೆ – ₹44,425-83,700
ಟೈಪಿಸ್ಟ್ ಹಾಗೂ ಟೈಪಿಸ್ಟ್-ಕಾಪಿಇಸ್ಟ್ ಹುದ್ದೆಗಳಿಗೆ -₹34,100-67,600
ಪ್ಯೂನ್‌ ಹುದ್ದೆಗಳಿಗೆ – ₹27,000-46,675

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ₹200
ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ…

• ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://chamarajanagara.dcourts.gov.in/online-recruitment/ಕ್ಕೆ ಭೇಟಿ ನೀಡಿ.

• ಬಳಿಕ ಮಾರ್ಚ್ 13ರಂದು ಸಕ್ರಿಯವಾಗುವ *ನೇಮಕಾತಿ ಶೀರ್ಷಿಕೆ* ಕೆಳಗೆ ನೀಡಲಾಗಿರುವ ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Stenographer Official Notification PDFDownload
Typist Official Notification PDFDownload
Typist-Copyist Official Notification PDFDownload
Peon Official Notification PDFDownload
Online Application Form Link(ಮಾ.13 ರಿಂದ)Apply
Official Websitechamarajanagara.dcourts.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಪ್ಯೂನ್‌ ಭರ್ತಿ; 13 ರಿಂದ ಅರ್ಜಿ”

Leave a Comment