ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಅಂಗನವಾಡಿ ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Published on:

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು/ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಗ್ರಾಮೀಣ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ 56 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 277 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://karnemakaone.kar.nic.in/abcd/ಗೆ ಭೇಟಿ ನೀಡಿ, ಅ.10ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ಸೆಪ್ಟೆಂಬರ್ 02, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 10, 2025

ಶೈಕ್ಷಣಿಕ ಅರ್ಹತೆ:

ನೇಮಕಾತಿ ಪ್ರಕಟಣೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿ.ಯು.ಸಿ ತೇರ್ಗಡೆ ಹೊಂದಿರಬೇಕು.

ಅಂಗನವಾಡಿ ಸಹಾಯಕಿ ಹುದ್ದೆಗೆ – ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 19 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply for Dakshina Kannada Anganwadi Recruitment 2025

ಅರ್ಜಿ ಸಲ್ಲಿಸುವ ವಿಧಾನ;

ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ಗೆ ಭೇಟಿ ನೀಡಿ.

Dakshina Kannada Anganwadi Recruitment 2025
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಹಂತ-1 ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆಯರು/ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ-2 ನಿಮ್ಮ ಭಾವ ಚಿತ್ರ, ಸಹಿ ಅಪ್ಲೋಡ್ ಮಾಡಲು
  • ಹಂತ-3 ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ
    • ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಮುದ್ರಿಸಿ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು;

  • ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ- 08256-295134.
  • ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ – 08255-298562
  • ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ – 0824-2263199
  • ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ – 0824-2959809
  • ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ. ಸಂ – 08251-298788
  • ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ – 7795581349
  • ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ – 08255-2380802

Important Direct Links:

Official Notification/Notice PDFDownload
Online Application Form LinkApply Now
Official Websitedk.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

14 thoughts on “ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ”

Leave a Comment