ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ದಲಾಯತ್/ಸೇವಕ ಹುದ್ದೆ..

Published on:

ಫಾಲೋ ಮಾಡಿ
DLSA Chamarajanagar Dalayat Attendants Notification 2026
DLSA Chamarajanagar Notification 2026

ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಓರ್ವ ದಲಾಯತ್/ಸೇವಕ ಹುದ್ದೆಯ ಭರ್ತಿಗಾಗಿ ಆಫ್‌ಲೈನ್‌ ಮೂಲಕ ಆರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ ಮುಗಿಸಿರುವವರು ಅರ್ಜಿ ಸಲ್ಲಿಕೆಗೆ ಅರ್ಹರು. ಅರ್ಜಿ ಸಲ್ಲಿಸಲು ಫೆ.19 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://chamarajanagara.dcourts.gov.inದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು ಮಾಹಿತಿ ತುಂಬಿ ನಿಗದಿತ ದಾಖಲೆಗಳನ್ನು ಲಗತ್ತಿಸಿ, “ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಕಟ್ಟಡ, ಜಿಲ್ಲಾ ನ್ಯಾಯಾಲಯದ ಆವರಣ, ಚಾಮರಾಜನಗರ”ಗೆ ತಲುಪಿಸಬೇಕು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment