ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ದಲಾಯತ್/ಸೇವಕ ಹುದ್ದೆ..

Published on:

ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಓರ್ವ ದಲಾಯತ್/ಸೇವಕ ಹುದ್ದೆಯ ಭರ್ತಿಗಾಗಿ ಆಫ್‌ಲೈನ್‌ ಮೂಲಕ ಆರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ ಮುಗಿಸಿರುವವರು ಅರ್ಜಿ ಸಲ್ಲಿಕೆಗೆ ಅರ್ಹರು. ಅರ್ಜಿ ಸಲ್ಲಿಸಲು ಫೆ.19 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://chamarajanagara.dcourts.gov.inದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು ಮಾಹಿತಿ ತುಂಬಿ ನಿಗದಿತ ದಾಖಲೆಗಳನ್ನು ಲಗತ್ತಿಸಿ, “ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಕಟ್ಟಡ, ಜಿಲ್ಲಾ ನ್ಯಾಯಾಲಯದ ಆವರಣ, ಚಾಮರಾಜನಗರ”ಗೆ ತಲುಪಿಸಬೇಕು.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ನೇಮಕಾತಿ ಪ್ರಕಟಣೆಯ ದಿನಾಂಕ – ಫೆಬ್ರವರಿ 05, 2026
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 19, 2026

ಶೈಕ್ಷಣಿಕ ಅರ್ಹತೆ:

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳ ಅನುಸಾರ

ಆಯ್ಕೆ ವಿಧಾನ:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾನದಂಡಗಳ ಅನ್ವಯ

ವೇತನ:

ಸರ್ಕಾರಿ ನಿಯಮಗಳ ಅನುಸಾರ

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ಜಾಲತಾಣ(https://chamarajanagara.dcourts.gov.in/)ದಲ್ಲಿ ಅರ್ಜಿ ನಮೂನೆಯನ್ನು ಪಡೆದು. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

ಈ ಕೆಳಗಿನ ವಿಳಾಸಕ್ಕೆ ಫೆಬ್ರವರಿ 19ರೊಳಗೆ ಅಂಚೆ ಮೂಲಕ/ಖುದ್ದಾಗಿ ತಲುಪಿಸಬೇಕು.

ವಿಳಾಸ: ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಕಟ್ಟಡ, ಜಿಲ್ಲಾ ನ್ಯಾಯಾಲಯದ ಆವರಣ, ಚಾಮರಾಜನಗರ

Important Direct Links:

Official Notification PDFDownload
Application Form PDFDownload
Official Websitechamarajanagara.dcourts.gov.in
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment