ಪ್ರಸಕ್ತ ಸಾಲಿನಲ್ಲಿ ವಿವಿಧ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್(Hostel Management Training Course)ಗಳ ತರಬೇತಿ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ನಲ್ಲಿ ವಸತಿಯುತ ಹೋಟೆಲ್ ಮ್ಯಾನೇಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ,
ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜುಲೈ 19, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 02, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ:
- ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಜನಾಂಗಕ್ಕೆ ಸೇರಿದವರಾಗಿರಬೇಕು.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ. ಒಳಗಿರಬೇಕು.
- ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
ವಿದ್ಯಾರ್ಹತೆ:
ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
02-08-2025 ರಂತೆ;
- ಕನಿಷ್ಠ ಮಿತಿ-18 ವರ್ಷಗಳು
- ಗರಿಷ್ಠ ಮಿತಿ – 35 ವರ್ಷಗಳು
ಕೊರ್ಸ್ ತರಬೇತಿ ಅವಧಿ ವಿವರ:

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿದಾರರು ಹತ್ತಿರದ ಗ್ರಾಮ್ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.
- ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ಮೂಲಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Important Direct Links:
Hostel Management Training Course for minority students 2025-26 Online Application Form Link | Apply Now |
Official Website | dom.karnataka.gov.in |
More Updates | KarnatakaHelp.in |