ಪ್ರಸಕ್ತ ಸಾಲಿನಲ್ಲಿ IIT, IIIT, NIT ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26 ನೇ ಶೈಕ್ಷಣಿಕ ವರ್ಷದಲ್ಲಿ IIT, IIIT, NIT IIM, IISER, AIIMS,NLU, INI ಮತ್ತು IUSLA ಮುಂತಾದ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನ/ ಉತ್ತೇಜನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
ಹಿಂದಿನ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ (ಬ್ಯಾಕ್ ಲಾಗ್) ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ಪಡೆಯಲು ಅವಕಾಶವಿರುವುದಿಲ್ಲ.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷರೂ. ಮೀರಿರಬಾರದು.
ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI mapping Active ಆಗಿರುವ ಬಗ್ಗೆ ಖಚಿತಪಡಿಸಿಕೊಂಡಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
2025-26 ನೇ ಸಾಲಿನ IT IM IISCS ಗಳಂತಹ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೊರ್ಸನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನ ಕಾರ್ಯಕ್ರಮಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ ಅರ್ಜಿ ನಮೂನೆ ಹುಡುಕಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಅಗತ್ಯ ಮಾಹಿತಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ವಿಶೇಷ ಸೂಚನೆ
ಸದರಿ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.
ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.