DOM Study Abroad Scholarship 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯವು ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 15 ಲಕ್ಷರೂ. ಮೀರಿರಬಾರದು.
ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ವಿದೇಶಿ ವಿಶ್ವವಿದ್ಯಾಲಯವು QS Top 500 University Ranking ಪಟ್ಟಿಯಲ್ಲಿ ಸ್ಥಾನ ಪಡೆದಿರಬೇಕು.
ವಿದ್ಯಾರ್ಥಿ ವೇತನವನ್ನು ಪಡೆಯಲು NPCI Active Status & ಬ್ಯಾಂಕ್ ನೊಂದಿಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಿದೆ.
ವಯೋಮಿತಿ:
ಕೊರ್ಸ್- ಪೂರ್ಣಕಾಲಿಕ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
ಅಲ್ಪಸಂಖ್ಯಾತರ ಇಲಾಖೆ ವತಿಯಿಂದ 2025-26 ನೇ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುಲು ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ ಅರ್ಜಿ ಹುಡುಕಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಅಗತ್ಯ ಮಾಹಿತಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹಾರ್ಡ್ ಕಾಪಿಯನ್ನು ಸಲ್ಲಿಸುವ ವಿಳಾಸ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ 1 ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ (ಅಫಿಡೆವಿಟ್ ಮತ್ತು ಶೂರಿಟಿಗಳು, ಜನರಲ್ ಪವರ್ ಆಫ್ ಅಟಾರ್ನಿ) ಅರ್ಜಿಗಳನ್ನು ಅಲ್ಪಸಂಖ್ಯಾತರ ನಿರ್ದೇಶನಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/new-page/Online%20Application/kn ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯಲ್ಲಿ ಕೇಳಲಾಗುವ ವಿವರಗಳನ್ನು ನಮೂದಿಸಿ. ಅರ್ಜಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ.
ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ-16ಸಿ, ಮೌಲಾನಾ ಅಬುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನಿಗದಿಪಡಿಸಿದ ದಿನಾಂಕದಂದು ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇ-ಮೇಲ್ ಮೂಲಕ ತಿಳಿಸಲಾಗುವುದು.
ವಿಶೇಷ ಸೂಚನೆ
ವಿದೇಶಿ ವಿದ್ಯಾರ್ಥಿವೇತನ ಯೋಜನೆಯ ಪ್ರಕ್ರಿಯೆಯು ಸರ್ಕಾರಿ ಆದೇಶದಲ್ಲಿನ ಷರತ್ತುಗಳಿಗೊಳಪಟ್ಟಿರುತ್ತದೆ. ಕಾಲಕಾಲಕ್ಕೆ ಹೊರಡಿಸಲಾಗುವ ಆದೇಶ ಹಾಗೂ ಷರತ್ತಿಗೊಳಪಟ್ಟು ಯಾವುದೇ ಅಂಶಗಳನ್ನು ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ.