2025-26ನೇ ಸಾಲಿಗೆ ಯು.ಪಿ.ಎಸ್.ಸಿ, ಕೆ.ಎ.ಎಸ್ ಮತ್ತು ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.
ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೀಡಲಾಗುವ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಜು.02 ರಿಂದ ಸೆ.06ರವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ತರಬೇತಿಗೆ ಆಯ್ಕೆ ಸಂಬಂಧ ನ.8 ಮತ್ತು 9ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Sc st ge elva