ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ; ಪ್ರವೇಶ ಪರೀಕ್ಷೆಯ ದಿನಾಂಕ ನಿಗದಿ

Published on:

2025-26ನೇ ಸಾಲಿಗೆ ಯು.ಪಿ.ಎಸ್.ಸಿ, ಕೆ.ಎ.ಎಸ್ ಮತ್ತು ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.

ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೀಡಲಾಗುವ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಜು.02 ರಿಂದ ಸೆ.06ರವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ತರಬೇತಿಗೆ ಆಯ್ಕೆ ಸಂಬಂಧ ನ.8 ಮತ್ತು 9ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ದಿನಾಂಕ

ನವೆಂಬರ್ 8ಕ್ಕೆ ಕೆಪಿಎಸ್ಸಿ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಗಳು ನಡೆಯಲಿವೆ.

ನವೆಂಬರ್ 9ಕ್ಕೆ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

Important Direct Links:

DOM UPSC KAS Group C Free Coaching Exam Date 2025 Notice PDFDownload
Official Websitehttps://dom.karnataka.gov.in/
More UpdatesKarnataka Help.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

4 thoughts on “ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ; ಪ್ರವೇಶ ಪರೀಕ್ಷೆಯ ದಿನಾಂಕ ನಿಗದಿ”

Leave a Comment