ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಸಿಬ್ಬಂದಿ ಪ್ರತಿಭಾ ನಿರ್ವಹಣಾ ಕೇಂದ್ರ(CEPТАМ)ದಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ “ಎ” ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಡಿ.11ರಿಂದ ಪ್ರಾರಂಭವಾಗಿದೆ.
ವಿವಿಧ ವಿಭಾಗಗಳಿಗೆ 561 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 203 ಟೆಕ್ನಿಷಿಯನ್ “ಎ” ಹುದ್ದೆಗಳು ಸೇರಿ ಒಟ್ಟು 764 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಡಿಪ್ಲೊಮಾ, ಬಿಎಸ್ಸಿ, ಐಟಿಐ ಉದ್ಯೋಗಾಕಾಂಕ್ಷಿಗಳು 2026ರ ಜ.01ರೊಳಗೆ DRDO ಅಧಿಕೃತ ಜಾಲತಾಣ https://drdo.gov.in/drdo/ದ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 11, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 01, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜನವರಿ 03, 2026
ಶೈಕ್ಷಣಿಕ ಅರ್ಹತೆ:
✓ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ; ಅಭ್ಯರ್ಥಿಗಳು AICTE ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಭಾಗದ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ/ಪದವಿ/ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
✓ ಟೆಕ್ನಿಷಿಯನ್ “ಎ” ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ಟ್ರೇಡ್ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-01-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
• ಟೈಯರ್-1 (CBT) ಪರೀಕ್ಷೆ • ಟೈಯರ್-2 ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ/ ಕೌಶಲ್ಯ ಪರೀಕ್ಷೆ • ದಾಖಲೆ ಪರಿಶೀಲನೆ • ವೈದ್ಯಕೀಯ ಪರೀಕ್ಷೆ • ಅಂತಿಮ ಮೆರಿಟ್ ಪಟ್ಟಿ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ (7ನೇ CPC ಪೇ ಮ್ಯಾಟ್ರಿಕ್ಸ್) ನಿಯಮಗಳ ಪ್ರಕಾರ ಮಾಹೆಯಾನ ವೇತನ, ಭತ್ಯೆ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
✓ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ; ಸಾಮಾನ್ಯ, ಓಬಿಸಿ, ಇಡಬ್ಲ್ಯೂಎಸ್ ಹಾಗೂ ಎಂ.ಎಸ್.ಪಿ ಅಭ್ಯರ್ಥಿಗಳಿಗೆ – ₹ 750 ಹಾಗೂ ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ₹ 500
✓ ಟೆಕ್ನಿಷಿಯನ್ “ಎ” ಹುದ್ದೆಗಳಿಗೆ; ಸಾಮಾನ್ಯ, ಓಬಿಸಿ, ಇಡಬ್ಲ್ಯೂಎಸ್ ಹಾಗೂ ಎಂ.ಎಸ್.ಪಿ ಅಭ್ಯರ್ಥಿಗಳಿಗೆ – ₹ 600, ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ₹ 500.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಅಭ್ಯರ್ಥಿಗಳು DRDO ಅಧಿಕೃತ ಜಾಲತಾಣ https://drdo.gov.in/drdo/ ಕ್ಕೆ ಭೇಟಿ ನೀಡಿ.
• ಪ್ರಕಟಣೆಗಳು ವಿಭಾಗದಲ್ಲಿ ನೀಡಲಾಗಿರುವ “CEPTAM-11 ಅಡಿಯಲ್ಲಿ STA-B ಮತ್ತು ತಂತ್ರಜ್ಞ-A ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ನಂತರ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಆಯ್ಕೆ ಮಾಡಿ.
• ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.